ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಗಳ ಚಿಹ್ನೆ, ಬಾವುಟ ಬಳಸುವಂತಿಲ್ಲ

ಪಂಚಾಯಿತಿ ಚುನಾವಣೆ: ತಹಶೀಲ್ದಾರ್ ಎಸ್.ರೇಣುಕಾ ಸೂಚನೆ
Last Updated 16 ಡಿಸೆಂಬರ್ 2020, 1:25 IST
ಅಕ್ಷರ ಗಾತ್ರ

ನರಸಿಂಹರಾಜಪುರ: ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಭಾಗಿಯಾಗ ಬಾರದು. ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರಪತ್ರಗಳಲ್ಲಿ ಮುದ್ರಿಸಿ, ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವಂತಿಲ್ಲ’ ಎಂದು ತಹಶೀಲ್ದಾರ್ ಎಸ್.ರೇಣುಕಾ ಸೂಚಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆ ಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ತಡೆಗಟ್ಟುವ ಬಗ್ಗೆ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದರು.

‘ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು, ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಟಿ.ವಿ ಮಾಧ್ಯಮ, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ’ ಎಂದರು.

ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚಿಹ್ನೆ ನೀಡಲಾಗಿದೆ. ಇದೇ 17ರಂದು ಗುರುಭವನದಲ್ಲಿ ಚುನಾವಣಾ ಅಧಿಕಾರಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದರು.

ಕೊಪ್ಪ ಡಿವೈಎಸ್ಪಿ ರಾಜು ಮಾಹಿತಿ ನೀಡಿ, ‘ನರಸಿಂಹರಾಜಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ 66 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 50 ಸಾಮಾನ್ಯ, 10 ಅತಿಸೂಕ್ಷ್ಮ ಹಾಗೂ 6 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮೆಣಸೂರು ಗ್ರಾಮ ಪಂಚಾಯಿತಿಯ ದ್ವಾರಮಕ್ಕಿ, ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಕುಶಾಲಪುರ, ಗುಬ್ಬಿಗಾ ಗ್ರಾಮ ಪಂಚಾಯಿತಿಯ ಈಚಿಕೆರೆ, ಬಾಳೆ ಗ್ರಾಮ ಪಂಚಾಯಿತಿಯ ಮೂಡಬಾಗಿಲು, ಕಾನೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೀತೂರು ಗ್ರಾಮ ಪಂಚಾಯಿತಿಯ ನಾಗರಮಕ್ಕಿ, ಬಿ.ಕಣಬೂರು ಗ್ರಾಮ ಪಂಚಾಯಿತಿಯ ಅಕ್ಷರನಗರ, ಸರ್ಕಾರಿ ಪದವಿ ಪೂರ್ವ ಕಾಲೇಜು ಕಡ್ಲೆಮಕ್ಕಿ ಮತಗಟ್ಟೆ ಅತಿಸೂಕ್ಷ್ಮ ಮತಗಟ್ಟೆಗಳಾಗಿವೆ’ ಎಂದರು.

ಪೊಲೀಸ್ ಇನ್‌ಸ್ಪೆಕ್ಟರ್ ಸುರೇಶ್, ಶಿರಸ್ತೇದಾರ್ ಇಫ್ತಿಕಾರ್, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರೇಮಕುಮಾರ್, ಕಂದಾಯ ಇಲಾಖೆಯ ಗಣಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT