ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾನ ಮನಸ್ಕರ ಶಿಕ್ಷಕರ ವೇದಿಕೆ’ಗೆ ಜಯ

ಕೊಪ್ಪ: ಶಿಕ್ಷಕರ ಸಂಘದ ಚುನಾವಣೆ
Last Updated 16 ಡಿಸೆಂಬರ್ 2020, 1:25 IST
ಅಕ್ಷರ ಗಾತ್ರ

ಕೊಪ್ಪ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯಕಾರಿ ಸಮಿತಿಯ 6 ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ‘ಸಮಾನ ಮನಸ್ಕರ ಶಿಕ್ಷಕರ ವೇದಿಕೆ’ ತಂಡ ಗೆದ್ದುಕೊಂಡಿದೆ.

ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಮೇಲುಬಿಳ್ರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಕೆ.ಆದರ್ಶ (151) ಮತ, ಹೆದ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಷಣ್ಮುಖರಾಜನ್ (146), ಸೋಮ್ಲಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಪಿ.ಮಂಜುನಾಥ (137), ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಎಂ.ರುದ್ರೇಶ್ (127) ಆಯ್ಕೆಗೊಂಡರು.

ಮಹಿಳಾ ಮೀಸಲು ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಜೋಗಿಸರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಗಂಗಾ ಸುಭಾಷ್ (155 ), ಅಂದಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎನ್.ಜಿ.ಸುಜಾತ ಅವರು (139) ಮತ ಪಡೆದು ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದ 4, ಮಹಿಳಾ ಮೀಸಲಾತಿಯ 2 ಸ್ಥಾನಗಳಿಗೆ ಚುನಾವಣೆ ನಡೆಯಿತು. ತಾಲ್ಲೂಕು ಸರ್ಕಾರಿ ನೌಕರರ ಸಂಘ ಹಾಗೂ ಸಂಘದ ರಾಜ್ಯ ಘಟದ ಅಧ್ಯಕ್ಷ ಷಡಕ್ಷರಿ ಅವರ ಬೆಂಬಲಿತ ತಂಡವಾಗಿರುವ ‘ಸಮಾನ ಮನಸ್ಕರ ಶಿಕ್ಷಕರ ವೇದಿಕೆ’ಯಿಂದ 6 ಸ್ಪರ್ಧಿಗಳು, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಅವರ ಬೆಂಬಲಿತ ತಂಡದಿಂದ 6 ಸ್ಪರ್ಧಿಗಳು ಚುನಾವಣೆಗೆ ಸ್ಪರ್ಧಿಸಿದ್ದರು.

ಪಟ್ಟಣದ ಗುರುಭವನದಲ್ಲಿ ಬೆಳಿಗ್ಗೆ 7.30 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಿತು. ಸಂಜೆ 5 ಗಂಟೆ ಬಳಿಕ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಘೋಷಿಸಲಾಯಿತು. ಚುನಾವಣಾಧಿಕಾರಿಯಾಗಿ ಎನ್.ಶೇಖರಪ್ಪ, ಸಹಾಯಕ ಚುನಾವಣಾಧಿಕಾರಿಯಾಗಿ ದಿವಾಕರ ಆಚಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT