ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಮಳೆ: 140 ವಿದ್ಯುತ್ ಕಂಬಗಳು ಧರೆಗೆ

Published 20 ಏಪ್ರಿಲ್ 2024, 15:41 IST
Last Updated 20 ಏಪ್ರಿಲ್ 2024, 15:41 IST
ಅಕ್ಷರ ಗಾತ್ರ

ಜಯಪುರ (ಬಾಳೆಹೊನ್ನೂರು): ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆ– ಗಾಳಿಯಿಂದ ಮೇಗುಂದಾ ಹೋಬಳಿಯಲ್ಲಿ 140 ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತವಾಗಿದೆ.

ರಾತ್ರಿ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಿದ್ದು, ದುರ್ಗಮ ಪ್ರದೇಶಗಳಾದ ಕೊಗ್ರೆ, ಮೆಣಸಿನಹಾಡ್ಯ, ಬಸರೀಕಟ್ಟೆ ಸೇರಿದಂತೆ ಹೋಬಳಿಯ ವಿವಿಧ ಕಡೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಈ ಭಾಗದ ಮೆಸ್ಕಾಂ ಸಿಬ್ಬಂದಿ ಹಗಲು– ರಾತ್ರಿ ಕೆಲಸ ನಿರ್ವಹಿಸುತ್ತಿದ್ದಾರೆ.

‘ಗ್ರಾಮೀಣ ಪ್ರದೇಶಗಳಲ್ಲಿ ಹಾನಿ ಪ್ರಮಾಣ ಜಾಸ್ತಿಯಾಗಿದ್ದು, ಸಿಬ್ಬಂದಿ ಮಳೆಯನ್ನೂ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ 400 ವಿದ್ಯುತ್ ಪರಿವರ್ತಕಗಳಿಗೆ ಸಂಪರ್ಕ ದೊರೆತಿದ್ದು, ಇನ್ನೂ 20 ಟಿ.ಸಿಗಳ ಸಂಪರ್ಕ ಸಾಧಿಸಬೇಕಿದೆ. 3 ವಿದ್ಯುತ್ ಪರಿವರ್ತಕಗಳು ಸಂಪೂರ್ಣ ಹಾನಿಯಾಗಿದೆ ಎಂದು ಮೆಸ್ಕಾಂ ಜೆಇ ಪ್ರಶಾಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT