ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪ | ವಿದ್ಯುತ್ ಸ್ಪರ್ಶ: ಮೂರು ಹಸು ಸಾವು

Published 28 ಜೂನ್ 2024, 14:18 IST
Last Updated 28 ಜೂನ್ 2024, 14:18 IST
ಅಕ್ಷರ ಗಾತ್ರ

ಕೊಪ್ಪ: ರಸ್ತೆ ಪಕ್ಕದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದ 3 ಹಸುಗಳು ಮೃತಪಟ್ಟ ಘಟನೆ ತಾಲ್ಲೂಕಿನ ಕೆಸವೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಸಿದ್ದರಮಠ ಸಮೀಪದ ಕರಿಗೆರಸಿ ಎಂಬಲ್ಲಿ ನಡೆದಿದೆ.

ಶುಕ್ರವಾರ ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುಗಳು ರಸ್ತೆ ಪಕ್ಕದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿವೆ. ಕರಿಗೆರಸಿಯ ರಾಮರಾಜ್ ಎಂಬುವರಿಗೆ ಸೇರಿದ 2 ಹಸುಗಳು, ಮಹೇಶ್ ಎಂಬುವರಿಗೆ ಸೇರಿದ 1 ಹಸು ಮೃತಪಟ್ಟಿವೆ.

ಸಾರ್ವಜನಿಕರು ಮೆಸ್ಕಾಂಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದರು. ವಿದ್ಯುತ್ ಸಂಪರ್ಕ ಕಡಿತಗೊಳಿಸಿದ  ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT