ಗುರುವಾರ , ಅಕ್ಟೋಬರ್ 29, 2020
28 °C

ಆನೆ ದಾಳಿ- ಇಬ್ಬರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡೂರು: ಕಾರಿನ ಮೇ‌ಲೆ ಒಂಟಿ ಸಲಗವೊಂದು ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡ ಘಟನೆ ತಾಲ್ಲೂಕಿನ ಬಿಳಚೇನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಹೊಸಪೇಟೆ ಗ್ರಾಮದಿಂದ ಶರತ್, ಭರತ್ ಮತ್ತು ಮೋಹನ್ ಮೂವರು ಕಾರಿನಲ್ಲಿ ಬಿಳಚೇನಹಳ್ಳಿ ಅರಣ್ಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಿನಿಂದ ಬಂದ ಆನೆ, ಕಾರಿನ ಮೇಲೆ ದಾಳಿ ಮಾಡಿದೆ. ಈ ಪೈಕಿ ಭರತ್ ಗೆ ತೀವ್ರ ಗಾಯಗಳಾಗಿದ್ದು, ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನೆ ದಾಳಿಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಶುಕ್ರವಾರದಿಂದಲೇ ಸಖರಾಯ ಪಟ್ಟಣ ಪೊಲೀಸರು ಆನೆಯೊಂದು ಓಡಾಡುತ್ತಿದೆ ಎಂಬ ಮಾಹಿತಿ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.