ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು: ಕಾಡಾನೆ ತುಳಿದು ವ್ಯಕ್ತಿ ಸಾವು

Published 5 ಮೇ 2024, 8:16 IST
Last Updated 5 ಮೇ 2024, 8:16 IST
ಅಕ್ಷರ ಗಾತ್ರ

ಆಲ್ದೂರು (ಚಿಕ್ಕಮಗಳೂರು): ಕಾಡಾನೆ ದಾಳಿಗೆ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಕಂಚಿನಕಲ್ ದುರ್ಗ ಸಮೀಪದ ಕೆಸವಿನಹಕ್ಲು ಎಸ್ಟೇಟ್‌ನಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.

ಎಸ್ಟೇಟ್‌ನಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಆನಂದ ಪೂಜಾರಿ(56) ಅವರು ಭಾನುವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗುವಾಗ ಆನೆ ದಾಳಿ ನಡೆಸಿದೆ. ಮಂಗಳೂರಿನ ಆನಂದ ಪೂಜಾರಿ ಅವರು, 35 ವರ್ಷಗಳಿಂದ ಇದೇ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಒಂದು ವರ್ಷದ ಅವಧಿಯಲ್ಲಿ ‌‌ಕಾಡಾನೆ ದಾಳಿಗೆ ಮೂವರು ಬಲಿಯಾಗಿದ್ದಾರೆ. ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT