ತರೀಕೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವು, ದೂರು ದಾಖಲು

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಹೋಬಳಿಯ ನಂದಿಬಟ್ಟಲು ಬಳಿ ಜಮೀನಿನ ಪಕ್ಕದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.
ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಸಂಗೀತಾ, ಅರಣ್ಯ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಆನೆ ವಯಸ್ಸು ಸುಮಾರು 20 ವರ್ಷ ಎಂದು ಅಂದಾಜಿಸಲಾಗಿದೆ. ಲಿಂಗದಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ಹೊಲದಲ್ಲಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಹರಿಸಲಾಗಿತ್ತು. ತಂತಿ ಸ್ಪರ್ಶಿಸಿ ಆನೆ ಮೃತಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಮೀನಿನ ಮಾಲೀಕರ ವಿರುದ್ಧ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.