ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಸ್‌ಗೆ ಅಡ್ಡ ಬಂದ ಒಂಟಿ ಸಲಗ: ಆತಂಕ

Published 13 ಜೂನ್ 2024, 16:06 IST
Last Updated 13 ಜೂನ್ 2024, 16:06 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಬುಧವಾರ ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಒಂಟಿ ಸಲಗ ಅಡ್ಡ ಬಂದು ಆತಂಕ ಸೃಷ್ಟಿಸಿತು.

ಬಸ್ ಚಾಲಕ ಬಸ್ ನಿಲ್ಲಿಸಿದ್ದು, ಕೆಲವು ಸಮಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬಸ್‌ನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು. ‘ಒಂಟಿ ಸಲಗ ದಾಳಿ ಮಾಡಬಹುದೆಂಬ ಭಯದಿಂದ ಕಂಗಾಲಾದೆವು’ ಎಂದು ಪ್ರಯಾಣಿಕರು ತಿಳಿಸಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗವೊಂದು ಬೀಡು ಬಿಟ್ಟಿದ್ದು, ಆಗಾಗ ರಸ್ತೆಗೆ ಬಂದು ಜನರಲ್ಲಿ ಭಯ ಉಂಟು ಮಾಡುತ್ತಿದೆ. ಕಾಡಾನೆಯು ಆಹಾರಕ್ಕಾಗಿ ರಸ್ತೆ ಬದಿಗೆ ಬರುತ್ತಿದ್ದು, ಇದರಿಂದ ಪ್ರವಾಸಿಗರು ಭಯದಿಂದ ಪ್ರಯಾಣ ಮಾಡುವಂತಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಾರ್ಮಾಡಿ ಘಾಟಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಯನ್ನು ಸ್ಥಳಾಂತರಿಸಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT