ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬದಲಾವಣೆ ಸುಳಿವು ನೀಡಿದ ಈಶ್ವರಪ್ಪ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ

Last Updated 2 ಡಿಸೆಂಬರ್ 2021, 4:54 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ರಾಜ್ಯದಲ್ಲಿನ ಈಗಿನ ಮುಖ್ಯಮಂತ್ರಿಯೂ ಬದಲಾವಣೆ ಆಗಲಿದ್ದಾರೆ ಎಂಬ ಮುನ್ಸೂಚನೆಯನ್ನು ಸಚಿವ ಕೆ.ಎಸ್‌. ಈಶ್ವರಪ್ಪ ನೀಡಿದ್ದಾರೆ. ಬಿಜೆಪಿ ವರಿಷ್ಠರು ಈಶ್ವರಪ್ಪ ಮೂಲಕ ಈ ಮಾತು ಹೇಳಿಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಆರ್‌ಎಸ್‌ಎಸ್‌ನ ಅಭಿಪ್ರಾಯವನ್ನೇ ನಳಿನ್‌ಕುಮಾರ್‌ ಕಟೀಲ್‌, ಸಿ.ಟಿ.ರವಿ ಹಾಗೂ ಈಶ್ವರಪ್ಪ ಅವರು ಹೇಳಿಕೆಯ ರೂಪದಲ್ಲಿ ಬಹಿರಂಗಪಡಿಸುತ್ತಾರೆ. ಆದ್ದರಿಂದ ಈ ಮುಖ್ಯಮಂತ್ರಿಯೂ ಬದಲಾಗುತ್ತಾರೆ ಎಂಬುದು ಖಚಿತವಾಗಿದೆ’ ಎಂದರು.

‘ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಬೆಲ್ಲದ್‌, ವಿಶ್ವನಾಥ್‌ ಅವರು ವಿಜಯೇಂದ್ರ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನಮ್ಮದು ಶಿಸ್ತಿನ ಪಕ್ಷ, ಶ್ರೀರಾಮಚಂದ್ರನ ಮೊಮ್ಮಕ್ಕಳು ನಾವು ಎಂದು ಹೇಳಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್‌ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT