ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡಿಗೆರೆ: ಎತ್ತಿನಭುಜ ಚಾರಣಕ್ಕೆ ನಿರ್ಬಂಧ

Published 21 ಜೂನ್ 2024, 13:11 IST
Last Updated 21 ಜೂನ್ 2024, 13:11 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಭುಜ ಪ್ರವಾಸಿ ತಾಣಕ್ಕೆ ಚಾರಣ ನಡೆಸುವುದನ್ನು ನಿರ್ಬಂಧಿಸಲಾಗಿದೆ.

ಈ ಸಂಬಂಧ ಅರಣ್ಯ ಇಲಾಖೆ ಶುಕ್ರವಾರ ಪ್ರಕಟಣೆ ಹೊರಡಿಸಿದ್ದು, ಎತ್ತಿನಭುಜಕ್ಕೆ ಚಾರಣ ಕೈಗೊಳ್ಳುವ ಚಾರಣಿಗರಿಗೆ ಅಗತ್ಯ ಸವಲತ್ತು ಒದಗಿಸುವ ಪೂರಕ ಕಾಮಗಾರಿ ನಡೆಯುತ್ತಿರುವುದರಿಂದ ಮುಂದಿನ ಆದೇಶದವರೆಗೂ ಎತ್ತಿನಭುಜ ಪ್ರವಾಸಿ ತಾಣಕ್ಕೆ ಚಾರಣ ಹೋಗುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಶಿಸ್ತುಕ್ರಮಕ್ಕೆ ಸೂಚನೆ: ಕಳೆದ ವಾರಾಂತ್ಯದಲ್ಲಿ ಎತ್ತಿನಭುಜಕ್ಕೆ ಚಾರಣಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಚಾರಣ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಿರುವ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅರಣ್ಯ ಸಚಿವ ಈಶ್ವರಖಂಡ್ರೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT