ಜಿಲ್ಲಾಧಿಕಾರಿ ಎಸ್ಪಿಗೆ ಮನವಿ
ಪತ್ರಿಕಾಗೋಷ್ಠಿ ಬಳಿಕ ವಿವಿಧ ಸಂಘಟನೆಗಳ ಮುಖಂಡರು ಅನಿಲ್‌ಕುಮಾರ್ ನೇತೃತ್ವದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ‘ಮರ್ಲೆ ಅಣ್ಣಯ್ಯ ದಂಟರಮಕ್ಕಿ ಶ್ರೀನಿವಾಸ್ ಕೃಷ್ಣಮೂರ್ತಿ ಅವರು ಸ್ವಹಿತಾಸಕ್ತಿಗಾಗಿ ಸಂಘಟನೆಗಳ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ. ಪ್ರಚೋದನೆ ನೀಡಿ ಸುಳ್ಳು ಪ್ರಕರಣ ದಾಖಲು ಮಾಡುವ ಪ್ರವೃತ್ತಿ ಹೊಂದಿದ್ದಾರೆ. ಆದ್ದರಿಂದ ಇವರನ್ನು ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು.