ಚಿಕ್ಕಮಗಳೂರು: ಜಾಕಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಮತ್ತು ಇಂಟರ್ ನ್ಯಾಷನಲ್ ಚಾಂಪಿಯನ್ಸ್ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಮನಸ್ಮಿತಾ ಅವರು ಕೃಷ್ಣನ ವೇಷ ಧರಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ನಿವಾಸಿ ಡಿ.ಎಮ್.ಧನಲಕ್ಷ್ಮಿಕುಮಾರಿ ಮತ್ತು ಹುಲಿಯಪ್ಪಗೌಡ ಅವರ 2ವರ್ಷದ ಮಗು ಮನಸ್ಮಿತಾ ಅವರಿಗೆ ಚಿನ್ನದ ಪದಕ ಮತ್ತು ಬೆಳ್ಳಿಯ ಕೃಷ್ಣನ ವಿಗ್ರಹ, ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ಲಭಿಸಿದೆ. ಇಂಟರ್ ನ್ಯಾಷನಲ್ ಚಾಂಪಿಯನ್ಸ್ ಅಕಾಡೆಮಿಯ ಸಂಸ್ಥಾಪಕಿ ಪ್ರಿಯಾ ಸುರೇಶ್ಕುಮಾರ್ ಮತ್ತು ಜಾಕಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್ತರ್ ಅವರು ಅಭಿನಂದಿಸಿದ್ದಾರೆ.

ಈ ಹಿಂದೆ ಮನಸ್ಮಿತಾ ಕೇವಲ 15 ತಿಂಗಳಿಗೆ 1115 ವಸ್ತುಗಳನ್ನು ಗುರುತಿಸಿ ಅತಿ ಹೆಚ್ಚು ವಸ್ತುಗಳನ್ನು ಗುರುತಿಸಿದ ವಿಶ್ವದ ಮೊದಲ ಮಗು ಎಂಬ ಕೀರ್ತಿಗೆ ಪಾತ್ರರಾಗಿದ್ದರು. ಇದನ್ನು ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ನೋಂದಾಯಿಸಲಾಗಿದೆ ಎಂದು ಪೋಷಕರಾದ ಹುಲಿಯಪ್ಪಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.