ಶನಿವಾರ, ಜುಲೈ 24, 2021
28 °C

ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೃಂಗೇರಿ (ಚಿಕ್ಕಮಗಳೂರು): ತಾಲ್ಲೂಕಿನ ನೆಮ್ಮಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದ್ಲುಬೈಲಿನ ಕೃಷಿಕ ಶಿವಪ್ಪ ನಾಯ್ಕ್ (62) ಅವರು ತಮ್ಮ ತೋಟದಲ್ಲಿ ವಿಷವನ್ನು ಸೇವಿಸಿ ಬಳಿಕ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.

ಮೃತರು ಮೊದಲು ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಕೆರೆಕಟ್ಟೆಯ ಕೆರೆಗದ್ದೆಯಲ್ಲಿ ವಾಸವಿದ್ದರು. ಪುನರ್ವಸತಿ ಯೋಜನೆಯಡಿ ತಮ್ಮ ಜಮೀನು ಬಿಟ್ಟುಕೊಟ್ಟು, ಬಂದ ಪರಿಹಾರದ ಹಣದಲ್ಲಿ ನೆಮ್ಮಾರ್ ಸಮೀಪ ಮದ್ಲುಬೈಲಿನಲ್ಲಿ 3 ಎಕರೆ 39 ಗುಂಟೆ ಜಮೀನು ಖರೀದಿಸಿದ್ದರು. ಅಲ್ಲಿ ಮನೆ ಕಟ್ಟಿಕೊಂಡು ಐದು ವರ್ಷಗಳಿಂದ ವಾಸವಾಗಿದ್ದರು.

‘ಗ್ರಾಮೀಣ ಸಹಕಾರಿ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿ ಕೃಷಿ ಅಭಿವೃದ್ಧಿ ಮಾಡಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಿಂದ ಅಡಿಕೆಗೆ ಕೊಳೆ ರೋಗ ಬಂದು ಸಾಲ ತೀರಿಸಲಾಗದೆ ತೊಂದರೆಗೆ ಸಿಲುಕಿದ್ದರು. ಅದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂದು ಮೃತರ ಕುಟುಂಬದವರು ಶೃಂಗೇರಿ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು