ಹೃದಯದಲ್ಲಿ ಸ್ಥಾನ ನೀಡಿ– ಬೆಳ್ಳಿಪ್ರಕಾಶ್‌

6

ಹೃದಯದಲ್ಲಿ ಸ್ಥಾನ ನೀಡಿ– ಬೆಳ್ಳಿಪ್ರಕಾಶ್‌

Published:
Updated:
Deccan Herald

ಕಡೂರು: ‘ಪರಿಶಿಷ್ಟ ಜಾತಿ, ವರ್ಗದವರ ಅಭ್ಯುದಯಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು.

ತಾಲ್ಲೂಕು ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿ ಭಾನುವಾರ ನಂದಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಕ್ಷೇತ್ರದಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿವೆ. ಸೀಮಿತವಾಗಿದ್ದ ಶಿಕ್ಷಣ ಇಂದು ಎಲ್ಲರಿಗೂ ಸಿಗುವಂತಾಗಿದೆ. ಪರಿಶಿಷ್ಟ ಜಾತಿ, ವರ್ಗಗಳ ನೌಕರರ ಸಮಸ್ಯೆಗಳು ಅನೇಕ ಇವೆ. ಅವುಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಪರಸ್ಪರ ಗೌರವದ ಮೂಲಕ ಉತ್ತಮ ಸಮಾಜ ನಿರ್ಮಾಣ ಇಂದಿನ ಅಗತ್ಯವಾಗಿದೆ’ ಎಂದರು.

‘‘ರಾಜಕೀಯ, ಶೈಕ್ಷಣಿಕ ಮೀಸಲಾತಿ ನೀಡಿರುವ ನೀವು ನಿಮ್ಮ ಹೃದಯದಲ್ಲಿ ನಮಗೆ ಮೀಸಲಾತಿ ನೀಡಿದ್ದೀರಾ?’ ಎಂಬ ಪ್ರಶ್ನೆಯನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಮಾರಂಭವೊಂದರಲ್ಲಿ ಕೇಳಿದ್ದರು. ಅವರ ಈ ಪ್ರಶ್ನೆಗೆ ಎಲ್ಲರೂ ತಲೆತಗ್ಗಿಸಿದ್ದರು. ಆದ್ದರಿಂದ ಎಲ್ಲರೂ ಅವರಿಗೆ ‘ಹೃದಯದಲ್ಲಿ ಸ್ಥಾನ ನೀಡಬೇಕು’’ ಎಂದು ಶಾಸಕರು ಸ್ಮರಿಸಿದರು.

ಎಚ್.ಎಂ.ರುದ್ರಸ್ವಾಮಿ ಮಾತನಾಡಿ, ‘ದೇಶಕ್ಕೆ ಬ್ರಿಟಿಷರು ಬಂದ ನಂತರವೇ ಶಿಕ್ಷಣ ಸಾವ್ರರ್ತಿಕಗೊಂಡಿತು. ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಪರಿಶಿಷ್ಟರಿಗೆ ಶಿಕ್ಷಣ ವ್ಯವಸ್ಥೆ ಮಾಡಿದ ಪ್ರಾತಃಸ್ಮರಣೀಯರು’ ಎಂದರು.

ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧನಪಾಲ ನಾಯ್ಕ ಮಾತನಾಡಿ, ‘‌ಪರಿಶಿಷ್ಟ ಜಾತಿ, ವರ್ಗದ ನೌಕರರು ಸಂಘಟನೆ ಆಗಬೇಕು ಎಂಬ ಆಶಯ ಹೊಂದಿರುವುದು ಆಶಾದಾಯಕ ಬೆಳವಣಿಗೆ’ ಎಂದರು.

ಸಮನ್ವಯ ಸಮಿತಿ ಅಧ್ಯಕ್ಷ ಕೆ.ನಾಗರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಉಪಾಧ್ಯಕ್ಷೆ ಪುಷ್ಪಲತಾ ಸಿ.ಕೆ.ಮೂರ್ತಿ, ಕುಳುವ ಸಮಾಜದ ತಾಲ್ಲೂಕು ಅಧ್ಯಕ್ಷ ಗಿರೀಶ್, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಸ್.ಕೆ.ಜಯಾನಂದ, ರಾಮಚಂದ್ರಪ್ಪ, ರಾಮಪ್ಪ ಚಲವಾದಿ ಇದ್ದರು.

ಇದೇ ಸಂದರ್ಭದಲ್ಲಿ ಶಾಸಕರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !