ಚಿಕ್ಕಮಗಳೂರು: ನೂತನ ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಹಾಡು ಬದಲಾವಣೆ ವಿಷಯಕ್ಕೆ ಸ್ನೇಹಿತರ ನಡುವೆ ಶನಿವಾರ ರಾತ್ರಿ ನಡೆದ ಜಗಳದಲ್ಲಿ ಚಾಕು ಇರಿತದಿಂದ ಪಕಾಳಿ ವರುಣ್(28) ಎಂಬ ಯುವಕ ಮೃತಪಟ್ಟಿದ್ದಾನೆ.
ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಟ್ಟಿತ್ತು. ಮುಕ್ತಾಯದ ಹಂತದಲ್ಲಿ ನೃತ್ಯ ಮಾಡಲು ಹಾಡುಗಳನ್ನು ಬದಲಾವಣೆ ಮಾಡುವ ವಿಷಯದಲ್ಲಿ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಪಕಾಳಿ ವರುಣ್ ಮೇಲೆ ಚಾಕುವಿನಿಂದ ಕೆಲವರು ದಾಳಿ ಮಾಡಿದ್ದಾರೆ. ಹೊಟ್ಟೆಯ ಭಾಗಕ್ಜೆ ಇರಿತವಾಗಿದ್ದು, ಕೂಡಲೇ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಶನಿವಾರ ತಡರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, 'ಜಗಳದಲ್ಲಿ ಸಂಜು ಮತ್ತು ಮಂಜು ಎಂಬುವವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು' ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.