ಬುಧವಾರ, ಅಕ್ಟೋಬರ್ 21, 2020
21 °C

ಸಂಘಟನೆಯೇ ಮೊದಲ ಆಯ್ಕೆ: ಸಿ.ಟಿ.ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ‘ಪಕ್ಷದಲ್ಲಿ ಕೆಲವು ಅಲಿಖಿತ ನಿಯಮಗಳಿವೆ, ಕೆಲ ಸಂದರ್ಭಗಳಲ್ಲಿ ಈ ನಿಯಮಗಳನ್ನು ವರಿಷ್ಠರೇ ಬದಲಾಯಿಸಿದ ಉದಾಹರಣೆಗಳೂ ಇವೆ. ಸಂಘಟನೆ ಮತ್ತು ಸರ್ಕಾರ ಈ ಪೈಕಿ ಸಂಘಟನೆಯೇ ಮೊದಲ ಆಯ್ಕೆ ಎಂಬುದನ್ನು ಪಕ್ಷಕ್ಕೆ ಸ್ಪಷ್ಟಪಡಿಸಿದ್ದೇನೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

‘ಒಬ್ಬರಿಗೆ ಒಂದೇ ಹುದ್ದೆ, 75 ವರ್ಷ ತುಂಬಿದವರು ಅಧಿಕಾರ ರಾಜಕಾರಣದಿಂದ ನಿವೃತ್ತಿಯಾಗಬೇಕು ಎಂಬುದು ಅಲಿಖಿತ ನಿಯಮದ ಭಾಗಗಳು. ವರಿಷ್ಠ ಮಂಡಳಿಯ ನಿಯಮಗಳನ್ನು ಬದಲಾಯಿಸಿದ ಕೆಲವು ಉದಾಹರಣೆಗಳೂ ಇವೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಉತ್ತರಿಸಿದರು.

‘ನವದೆಹಲಿಯಲ್ಲಿ ಇದೇ 5ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು 6ರಂದು ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಇದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್‌ ಶಾ, ಸಂತೋಷ್‌ ಅವರೊಂದಿಗೆ ಅಲ್ಲಿ ಸಮಾಲೋಚಿಸುತ್ತೇನೆ. ಅವರು ವಹಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು