ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪ | ಅಧ್ಯಕ್ಷ ಸ್ಥಾನಕ್ಕೆ ಐವರು ಪೈಪೋಟಿ

ರವಿಕುಮಾರ್ ಶೆಟ್ಟಿಹಡ್ಲು
Published : 12 ಆಗಸ್ಟ್ 2024, 7:52 IST
Last Updated : 12 ಆಗಸ್ಟ್ 2024, 7:52 IST
ಫಾಲೋ ಮಾಡಿ
Comments

ಕೊಪ್ಪ: ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಎಂದು ಘೋಷಣೆಯಾಗಿದೆ. ಆಡಳಿತ ಚುಕ್ಕಾಣಿ ಈ ಬಾರಿ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ ಸಿಗುವ ಸಾಧ್ಯತೆ ಹೆಚ್ಚಿದೆ.

11 ಸದಸ್ಯರಿರುವ ಪಂಚಾಯಿತಿಯಲ್ಲಿ ಬಿಜೆಪಿ 6, ಕಾಂಗ್ರೆಸ್ 4, ಪಕ್ಷೇತರ 1 ಸ್ಥಾನ ಇದೆ. ಈಗಾಗಲೇ ಘೋಷಣೆಯಾಗಿರುವ ಮೀಸಲಾತಿ ಪ್ರಕಾರ ಬಿಜೆಪಿ ಚುನಾಯಿತ ಪ್ರತಿನಿಧಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ. ಅಧ್ಯಕ್ಷ ಸ್ಥಾನಕ್ಕೆ 5 ಮಂದಿ ಅರ್ಹರಿದ್ದು, ಅವರ ನಡುವೆಯೇ ಪೈಪೋಟಿ ಇದೆ.

4 ಸ್ಥಾನ ಹೊಂದಿರುವ ಕಾಂಗ್ರೆಸ್‌ಗೆ ಕ್ಷೇತ್ರದ ಶಾಸಕರ ಬೆಂಬಲವಿದೆ. ಒಂದು ವೇಳೆ ಪಕ್ಷೇತರ ಸದಸ್ಯರೊಬ್ಬರ ಬೆಂಬಲ ಸಿಕ್ಕಿದರೆ  6 ಸ್ಥಾನಕ್ಕೆ ಕಾಂಗ್ರೆಸ್ ಸೀಮಿತಗೊಳ್ಳಬೇಕಾಗತ್ತದೆ. ಬಿಜೆಪಿಗೆ ಲೋಕಸಭಾ ಸದಸ್ಯ, ವಿಧಾನ ಪರಿಷತ್ ಸದಸ್ಯ ಇವರಿಬ್ಬರ ಬೆಂಬಲ ಸಿಕ್ಕಿದರೆ ಬಿಜೆಪಿ 8 ಸ್ಥಾನಕ್ಕೆ ಏರಲಿದೆ.

ಕಾಂಗ್ರೆಸ್ ಸದಸ್ಯರ ಸಂಖ್ಯಾ ಬಲ ಕಡಿಮೆ ಇದ್ದು, ಬಿಜೆಪಿ ಪಕ್ಷದ ಸದಸ್ಯರು ಕಾಂಗ್ರೆಸ್‌ಗೆ ಬೆಂಬಲ ಸೂಚಿಸುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಬಿಜೆಪಿ ನಿರಾಯಾಸವಾಗಿ ಆಡಳಿತ ಚುಕ್ಕಾಣಿ ಹಿಡಿಯುವ ಸಾಧ್ಯತೆಯೇ ಹೆಚ್ಚಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT