ಬುಧವಾರ, ಆಗಸ್ಟ್ 10, 2022
23 °C
ಶೃಂಗೇರಿ, ಮೂಡಿಗೆರೆ ತಾಲ್ಲೂಕಿನ ಪ್ರದೇಶಗಳಿಗೆ ಭೇಟಿ

ನೆರೆ ಹಾನಿ: ಕೇಂದ್ರದ ತಂಡ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಮಧುಗುಂಡಿ ಗ್ರಾಮಕ್ಕೆ ಶುಕ್ರವಾರ ಕೇಂದ್ರದ ನೆರೆ ಹಾನಿ ಪರಿಶೀಲನಾ ತಂಡದಲ್ಲಿರುವ ಹೆದ್ದಾರಿ ಸಚಿವಾಲಯದ ಅಧೀಕ್ಷಕ ಎಂಜಿನಿಯರ್‌ ಸದಾನಂದ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರದ ವಿಪತ್ತು ಮತ್ತು ನಿರ್ವಹಣಾ ತಂಡದ ಆಯುಕ್ತ ಮನೋಜ್ ಮಾತನಾಡಿ, ‘ತೌತೆ ಚಂಡಮಾರುತದಿಂದ ಹಾನಿಯಾದ ಪ್ರದೇಶಗಳ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರತಿ ಜಿಲ್ಲೆಯಲ್ಲಿ ಚಂಡಮಾರುತದಿಂದಾದ ಮನೆ, ರಸ್ತೆ, ಸೇತುವೆ, ಕೃಷಿ ಭೂಮಿಯ ಹಾನಿಯ ಕುರಿತ ಅನಾಹುತಗಳ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ತರಿಸಿಕೊಂಡು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ’ ಎಂದರು.

‘ಜಿಲ್ಲೆಯಲ್ಲಿ 300 ಕಿ.ಮೀ. ನಷ್ಟು ರಸ್ತೆ ಹಾನಿಯಾಗಿದೆ ಎಂದು ವರದಿ ಇದ್ದು, ಜಿಲ್ಲೆಯ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ್ದು ಮಧುಗುಂಡಿಯಲ್ಲಿ 7.5 ಕಿ.ಮೀ ಡಾಂಬಾರು ರಸ್ತೆ ಹಾನಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳೀಯರ ಬಳಿ ಮಾಹಿತಿ ಕಲೆ ಹಾಕಲಾಗಿದೆ. ಅದರ ಪ್ರಕಾರ ನಮ್ಮ ತಂಡ ಸಚಿತ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ’ ಎಂದರು.

ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್, ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್ ನಾಗರಾಜ್, ಲೋಕೋಪಯೋಗಿ ಇಲಾಖೆ ಎಇಇ ಮಂಜುನಾಥ್, ತಹಶೀಲ್ದಾರ್ ರಮೇಶ್, ಜಿಲ್ಲಾ ಪಂಚಾಯಿತಿ ಎಇಇ ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಪ್ರಭಾರ ಇಒ ಪ್ರಕಾಶ್‌, ಶೃಂಗೇರಿ ತಹಶೀಲ್ದಾರ್ ಅಂಬುಜಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು