ಗುರುವಾರ , ಜೂನ್ 30, 2022
24 °C

​ಚಿಕ್ಕಮಗಳೂರು: ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಬೀರೂರಿನ ಅಮೃತ್ ಮಹಲ್ ತಳಿ ಸಂವರ್ಧನಾ ಕೇಂದ್ರದ ಆವರಣದಲ್ಲಿರುವ ಚೌಡೇಶ್ವರಿ ದೇಗುಲ ಸನಿಹ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಕೇಂದ್ರದ ಸುತ್ತಮುತ್ತಲಿನ ಭಾಗದಲ್ಲಿ ಚಿರತೆ ಓಡಾಟದ ಬಗ್ಗೆ ಸಿಬ್ಬಂದಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯವರು ವಾರದ ಹಿಂದೆ ಈ ಪ್ರದೇಶದಲ್ಲಿ ಬೋನು ಇಟ್ಟಿದ್ದರು.

ಉಪವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಹರೀಶ್ ಅವರು ಚಿರತೆ ಇದ್ದ ಬೋನನ್ನು ಕಡೂರಿಗೆ ಸಾಗಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು