ಶುಕ್ರವಾರ, ಜೂನ್ 25, 2021
26 °C

ಚಿಕ್ಕಮಗಳೂರು: ಅರಣ್ಯ ಭೂಮಿ ಒತ್ತುವರಿ; ಡಿಆರ್‌ಎಫ್‌ಒ ಶಿವರುದ್ರಪ್ಪ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಅರಣ್ಯ ಜಾಗ ಒತ್ತುವರಿಯಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಲಯ ಅರಣ್ಯಾಧಿಕಾರಿ, ಮೋಜಣಿದಾರ ಎಸ್‌.ಶಿವರುದ್ರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ್‌ ಪಂವಾರ್‌ ಅವರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕೊಪ್ಪ ತಾಲ್ಲೂಕಿನ ಅಸಗೋಡಿನ ಸರ್ವೆ ನಂ 227ರ ಸೆಕ್ಷನ್‌–4 ಅಧಿಸೂಚಿತ ಅರಣ್ಯ ಜಾಗವನ್ನು ಒತ್ತುವರಿ ಮಾಡಿ ಬೇಲಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ, ಇತರ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಶಿವರುದ್ರಪ್ಪ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಿವರುದ್ರಪ್ಪ ಅವರು ಪ್ರಸ್ತುತ ಕೊಗ್ರೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಶಂಗೇರಿ ವಲಯದ ಕಸಬಾ ಶಾಖೆಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು