ಬಾವಿಕೆರೆ ಕೋವಿಡ್ ಆರೈಕೆ ಕೇಂದ್ರ: ಮಾಜಿ ಶಾಸಕರಿಂದ ನೃತ್ಯ

ಚಿಕ್ಕಮಗಳೂರು: ಜಿಲ್ಲೆಯ ಬಾವಿಕೆರೆ ಗ್ರಾಮದಲ್ಲಿನ ಕೋವಿಡ್ ಆರೈಕೆ ಕೇಂದ್ರದಲ್ಲಿ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಇತರರು ನೃತ್ಯ ಮಾಡಿ ರೋಗಿಗಳನ್ನು ರಂಜಿಸಿದ್ದಾರೆ.
ಕೇಂದ್ರದಲ್ಲಿ ಈಚೆಗೆ ಆಯೋಜಿಸಿದ್ದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ಯಾರೇ ನೀನು ರೋಜಾ ಹೂವೇ...’ ಚಿತ್ರಗೀತೆಗೆ ಹೆಜ್ಜೆ ಹಾಕಿದ್ದಾರೆ. ಮಾಜಿ ಶಾಸಕರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸಾಥ್ ನೀಡಿದ್ದಾರೆ.
ಧೈರ್ಯದಿಂದ ಕೋವಿಡ್ ಎದುರಿಸುವಂತೆ ರೋಗಿಗಳಿಗೆ ಸಲಹೆ ನೀಡಿದ್ದಾರೆ. ಕೇಂದ್ರದಲ್ಲಿಯೇ ಆಹಾರ ಸೇವಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.