ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು: ಪ್ಯಾಲೆಸ್ಟೀನ್ ಬಾವುಟ ಹಿಡಿದು ಓಡಾಡಿದ್ದ 6 ಅಪ್ರಾಪ್ತರು ವಶಕ್ಕೆ

Published : 16 ಸೆಪ್ಟೆಂಬರ್ 2024, 6:19 IST
Last Updated : 16 ಸೆಪ್ಟೆಂಬರ್ 2024, 6:19 IST
ಫಾಲೋ ಮಾಡಿ
Comments

ಚಿಕ್ಕಮಗಳೂರು: ಪ್ಯಾಲೆಸ್ಟೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಪೊಲೀಸರು ತಿಳಿಸಿದ್ದಾರೆ.

‘ನಗರದ ದಂಟರಮಕ್ಕಿ ಕೆರೆ ಏರಿ ಮೇಲಿನ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಪ್ಯಾಲೆಸ್ಟೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದ್ದು, ಅವರೆಲ್ಲರೂ ಅಪ್ರಾಪ್ತರು. ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ಯಾಲೆಸ್ಟೀನ್ ಬಾವುಟ ಹಿಡಿದು ಭಾನುವಾರ ಮಧ್ಯಾಹ್ನ ಸಂಚರಿಸುತ್ತಿದ್ದ ವಿಡಿಯೊ ಹರಿದಾಡುತ್ತಿದ್ದಂತೆ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ನಗರ ಠಾಣೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT