ಸೋಮವಾರ, ಸೆಪ್ಟೆಂಬರ್ 26, 2022
21 °C

‘ಸ್ವಾತಂತ್ರ್ಯ ಹೋರಾಟಗಾರರ ಜೀವನ ಸ್ಫೂರ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತರೀಕೆರೆ: ಮಹಾತ್ಮ ಗಾಂಧಿಯಂತಹ ಅನೇಕ ಮಹಾತ್ಮರ ತ್ಯಾಗ, ಬಲಿದಾನದ ಫಲವಾಗಿ ನಾವು ಸ್ವಾತಂತ್ರ್ಯ ಪಡೆದಿದ್ದೇವೆ. ಅವರು ತಮ್ಮ ಜೀವ ಜೀವನವನ್ನು ಪಣಕ್ಕಿಟ್ಟು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಅವರ ಆದರ್ಶಗಳು ನಮಗೆ ಅನುಕರಣೀಯ ಎಂದು ಪ್ರಾಂಶುಪಾಲೆ ಹರ್ಷಿಣಿ ಹೇಳಿದರು.

ಪಟ್ಟಣದ ಸದ್ವಿದ್ಯಾ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಏಕೋರಾಮಸ್ವಾಮಿ ಜೊತೆ ಸಂವಾದದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಏಕೋರಾಮಸ್ವಾಮಿ ಅವರೊಡನೆ ಮುಕ್ತ ಸಂವಾದ ನಡೆಸಿದರು. ಅವರು ತಮ್ಮ ಹೋರಾಟದ ಅನುಭವ ಹಂಚಿಕೊಂಡರು.

ಹಿರಿಯ ಪತ್ರಕರ್ತ ಅನಂತನಾಡಿಗ್ ಮಾತನಾಡಿ, ಮಹನೀಯರ ಜೀವನ ಚರಿತ್ರೆ ಪುಸ್ತಕಗಳನ್ನು ಓದುವ ಜೊತೆಗೆ ಅವರ ತತ್ವಗಳನ್ನು ಪಾಲಿಸಬೇಕು ಎಂದರು.

ಶಾಲೆಯ ಟ್ರಸ್ಟಿ ಕುಮಾರ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. ಮಂಜುನಾಥ್ ನಿರೊಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.