ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾಂಧಿ, ಶಾಸ್ತ್ರಿ ತತ್ವಾದರ್ಶಗಳು ಅಭಿವೃದ್ಧಿಗೆ ಪೂರಕ’

Last Updated 3 ಅಕ್ಟೋಬರ್ 2022, 4:36 IST
ಅಕ್ಷರ ಗಾತ್ರ

ಕೊಪ್ಪ: ‘ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವಾದರ್ಶಗಳು ದೇಶದ ಅಭಿವೃದ್ಧಿ ದಿಕ್ಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್(ಇದ್ದಿನಬ್ಬ) ಹೇಳಿದರು.

ಪಟ್ಟಣ ಪಂಚಾಯಿತಿ ವತಿಯಿಂದ ಭಾನುವಾರ ನಡೆದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾತ್ಮ ಗಾಂಧೀಜಿ ಅವರು ಸತ್ಯ, ಅಹಿಂಸೆ ಪಾಲನೆ ಮಾಡುವ ಜೊತೆಗೆ ಅನೇಕ ಚಳವಳಿಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಅವಿರತ ಶ್ರಮಿಸಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ‘ಜೈ ಜವಾನ್ ಜೈ ಕಿಸಾನ್’ ಘೋಷಣೆಯೊಂದಿಗೆ ದೇಶದ ಅಭಿವೃದ್ಧಿಗೆ ಹೊಸ ಪಥವನ್ನು ನಿರ್ಮಿಸಿಕೊಟ್ಟಿದ್ದಾರೆ’ ಎಂದು ತಿಳಿಸಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಾಯತ್ರಿ ವಸಂತ್, ಮುಖ್ಯಾಧಿಕಾರಿ ಸುಬ್ಬಣ್ಣ, ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಆರ್.ನಾರಾಯಣ, ಉಪಾಧ್ಯಕ್ಷ ಎಸ್.ಮೂರ್ತಿ, ಪಟ್ಟಣ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT