ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧಿ ಆದರ್ಶ ಪ್ರಪಂಚಕ್ಕೆ ಮಾದರಿ: ಪ್ರಶಾಂತ್ ಶೆಟ್ಟಿ

Last Updated 3 ಅಕ್ಟೋಬರ್ 2022, 4:43 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಮಹಾತ್ಮ ಗಾಂಧಿಯ ತತ್ವ, ಆದರ್ಶ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ ತಿಳಿಸಿದರು.

ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಭಾನುವಾರ ನಡೆದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ಕನಸನ್ನು ನನಸು ಮಾಡುವಲ್ಲಿ ಇದೇ 11ರಂದು ಪ್ರತಿ ವಾರ್ಡ್ ನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಬಸ್ತಿಮಠದಿಂದ ಚಾಲನೆ ನೀಡಲಾಗುತ್ತದೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ ಮಾತನಾಡಿ, ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಮಾ, ಸದಸ್ಯರಾದ ಶೋಜಾ, ಮುನಾವರ್ ಪಾಷ, ಸೈಯದ್ ವಸೀಂ, ಮುಖ್ಯಾಧಿಕಾರಿ ಚಂದ್ರಕಾಂತ್, ಆರೋಗ್ಯ ನಿರೀಕ್ಷಕ ವಿಜಯಕುಮಾರ್, ಸಮುದಾಯ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT