ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ ಬದುಕು ಎಲ್ಲರಿಗೂ ಮಾದರಿ: ಸುದರ್ಶನ್

Last Updated 3 ಅಕ್ಟೋಬರ್ 2022, 4:28 IST
ಅಕ್ಷರ ಗಾತ್ರ

ಬೀರೂರು: ಸತ್ಯ, ಅಹಿಂಸೆ ಮತ್ತು ಸರಳತೆಯ ಬದುಕಿನ ಮೂಲಕ ಸ್ವಾತಂತ್ರ್ಯ ಚಳವಳಿಯ ನೇತೃತ್ವ ವಹಿಸಿದ ಮಹಾತ್ಮ ಗಾಂಧಿ ಅವರ ಜೀವನ ಎಲ್ಲರಿಗೂ ಮಾದರಿ ಎಂದು ಪುರಸಭಾಧ್ಯಕ್ಷ ಎಂ.ಪಿ.ಸುದರ್ಶನ್ ಹೇಳಿದರು.

ಪುರಸಭೆ ಸಭಾಂಗಣದಲ್ಲಿ ಭಾನುವಾರ 153ನೇ ಗಾಂಧಿ ಜಯಂತಿ ಹಾಗೂ ಲಾಲ್‌ ಬಹದ್ದೂರ್ ಶಾಸ್ತ್ರಿಯವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮೋಹನ್ ಕುಮಾರ್ ಮಾತನಾಡಿ, ‘ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಶಾಶ್ವತವಾಗಿರುವ ಹೆಸರು ಅಂದರೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರದು. ಒಬ್ಬರು ಶಾಂತಿ ಪಥ ಅನುಸರಿಸಿದರೆ, ಮತ್ತೊಬ್ಬರು ಸರಳತೆ ಮತ್ತು ಪ್ರಾಮಾಣಿಕತೆಗಾಗಿ ಜೀವನ ಮುಡಿಪಾಗಿಟ್ಟರು. ಈ ಎರಡು ಧ್ರುವತಾರೆಗಳ ಮಾರ್ಗ ಎಂದಿಗೂ ಪ್ರಸ್ತುತ’ ಎಂದರು.

ನಾಮನಿರ್ದೇಶನ ಸದಸ್ಯ ಮಲ್ಲಿಕಾರ್ಜುನ್, ಮುಖ್ಯಾಧಿಕಾರಿ ಮಂಜಪ್ಪ, ಸದಸ್ಯರಾದ ಲೋಕೇಶಪ್ಪ, ಸುಮಿತ್ರ ಮಾತನಾಡಿದರು.

ಉಪಾಧ್ಯಕ್ಷೆ ಮೀನಾಕ್ಷಮ್ಮ, ಸದಸ್ಯರಾದ ಎನ್.ಎಂ.ನಾಗರಾಜ್, ಶ್ರೀಧರ್, ರಘು, ಮಾನಿಕ್ ಬಾಷಾ ಮತ್ತು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್, ಕಂದಾಯ ಅಧಿಕಾರಿ ಯೋಗೀಶ್, ಕಂದಾಯ ನಿರೀಕ್ಷಕಿ ಶ್ವೇತಾ, ಗಿರಿರಾಜ್, ತಮ್ಮಣ್ಣ ಮತ್ತು ಸಿಬ್ಬಂದಿ ಇದ್ದರು.

ಕಾಂಗ್ರೆಸ್‌ನಿಂದ ಆಚರಣೆ: ಬೀರೂರು ಮತ್ತು ಕಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು.

ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ವಿನಾಯಕ, ಕಡೂರು ಮತ್ತು ಬೀರೂರು ಬ್ಲಾಕ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಾಸಯ್ಯನ ಗುತ್ತಿ ಚಂದ್ರಪ್ಪ, ಮನು, ಪ್ರದೀಪ್, ಭೀಮಪ್ಪ, ರುದ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT