ನರಸಿಂಹರಾಜಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಿದ ಇಬ್ಬರು ಆರೋಪಿಗಳಿಗೆ ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಘಟನೆಯ ಹಿನ್ನೆಲೆ: 2025ರ ಫೆಬ್ರುವರಿ 18ರಂದು ಮುತ್ತಿನಕೊಪ್ಪದಿಂದ ಲಕ್ಕಿನಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ 104 ಗ್ರಾಂ. ತೂಕದ ಗಾಂಜಾ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು.

ಶಿವಮೊಗ್ಗ ಸೂಳೇಬೈಲ್ ನಿವಾಸಿ ಮಹಮ್ಮದ್ ಫತಾವುಲ್ಲಾ (38), ಭದ್ರಾವತಿ ಪೇಪರ್ ಟೌನ್ ನಿವಾಸಿ ಪ್ರೀತಮ್ (25) ಆರೋಪಿಗಳು.

ಆರೋಪ ಸಾಬೀತಾದ ಹಿನ್ನೆಲೆ ಹಿರಿಯ ಸಿವಿಲ್ ನ್ಯಾಯಾಧೀಶರು, ಆರೋಪಿಗಳಿಗೆ 6 ತಿಂಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ ₹5 ಸಾವಿರ ದಂಡ ವಿಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಬೈಕ್ನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು, ವಶಪಡಿಸಿಕೊಂಡ ಗಾಂಜಾವನ್ನು ಕಾನೂನು ಬದ್ಧವಾಗಿ ವಿಲೇವಾರಿ ಮಾಡಲು ಆದೇಶಿಸಿದ್ದಾರೆ.

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಿ.ಎಸ್. ನಿರಂಜನಗೌಡ ದಾಳಿ ನಡೆಸಿದ್ದರು. ಅಪರಾಧ ವಿಭಾಗದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ವಕೀಲ ಗದಿಗೆಪ್ಪಜಿ ನೇಕಾರ್ ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿಗಳಾದ ಎನ್.ಯು. ಆಸೀಫ್, ಪರಮೇಶ್, ನವೀನ್ ತನಿಖಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.