ಬೀರೂರು/ಕಡೂರು: ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು.

ಸಂಜೆ ಆರು ಗಂಟೆ ಸುಮಾರಿಗೆ ರಸ್ತೆ ತಿರುವಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿದೆ. ಟ್ಯಾಂಕರ್ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಯ ಎಂಜಿನಿಯರ್ಗಳು ಸ್ಥಳಕ್ಕೆ ಬಂದು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲಿಯವರೆಗೆಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.