ಕೊಪ್ಪ: ‘ಖಾಸಗಿ ಶಿಕ್ಷಣ ಸಂಸ್ಥೆಗಳ ಎದುರು ಸರ್ಕಾರಿ ಶಾಲೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿವೆ. ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಕರು ಇದ್ದಾರೆ. ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಮಕ್ಕಳ ಹಾಜರಾತಿ ಪ್ರಮಾಣ ಹೆಚ್ಚು ಮಾಡಬೇಕು’ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅವರು ಮಾತನಾಡಿದರು.

‘ಪೋಷಕರ ಸಹಕಾರದೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತುಕೊಟ್ಟಿರುವ ನಾನು ಶಾಲೆಗಳಿಗೆ ಸಂಬಂಧಿಸಿದಂತೆ ಶೇ 90 ರಷ್ಟು ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ. ಈ ಬಾರಿ 3 ಪಬ್ಲಿಕ್ ಶಾಲೆ ಶೃಂಗೇರಿ ಕ್ಷೇತ್ರಕ್ಕೆ ಮಂಜೂರು ಮಾಡಿಸಲಾಗಿದೆ’ ಎಂದು ತಿಳಿಸಿದರು.

ಸರ್ಕಾರಿ ಉರ್ದು ಶಾಲಾ ಮುಖ್ಯಶಿಕ್ಷಕಿ ವಿಶಾಲ, ಕೆಡಿಪಿ ಸದಸ್ಯರಾದ ಬಿ.ಪಿ.ಚಿಂತನ್, ಅಶೋಕ್ ನಾರ್ವೆ, ರಾಜಶಂಕರ್, ಮೊಹಮ್ಮದ್ ಸಾದಿಕ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್, ಬಗರ್ ಹುಕುಂ ಸಮಿತಿ ಸದಸ್ಯರಾದ ಅನ್ನಪೂರ್ಣ ನರೇಶ್, ನುಗ್ಗಿ ಮಂಜುನಾಥ್, ಶಂಕರಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಇಸ್ಮಾಯಿಲ್, ಮೈತ್ರಾ, ವಿಜಯಕುಮಾರ್, ನಾಮನಿರ್ದೇಶಿತ ಸದಸ್ಯ ಮಹಮ್ಮದ್ ಗೌಸ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ, ಎಸ್ಡಿಎಂಸಿ ಅಧ್ಯಕ್ಷ ಮಹಮ್ಮದ್ ಆಲಿ, ಶಾಲಾಭಿವೃದ್ಧಿ ಟ್ರಸ್ಟ್ ಸದಸ್ಯ ಶಬೀರ್ ನಾರ್ವೆ, ಕ್ಷೇತ್ರ ಸಮನ್ವಯಯಾಧಿಕಾರಿ ಯಶೋಧ, ಅಕ್ಷರ ದಾಸೋಹ ಸಹಾಯಕ ಶೇಖರಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿ.ರಾಜೇಂದ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ ಕೆ.ಕೆ., ಕರ್ನಾಟಕ ಪಬ್ಲಿಕ್ ಶಾಲೆ ಕಾರ್ಯಾಧ್ಯಕ್ಷ ಶಿವಾನಂದ ಕೆ.ಎನ್., ಶಿಕ್ಷಣ ಸಂಯೋಜಕ ಆರ್.ಡಿ. ರವೀಂದ್ರ, ಸುಚಿತ್ ಚಂದ್ರ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.