ಚಿಕ್ಕಮಗಳೂರು: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭಕ್ಕೆ ತೊಡಕಾಗಿದ್ದ ಜಾಗದ ವಿವಾದ ಕೊನೆಗೂ ಇತ್ಯರ್ಥಗೊಂಡಿದೆ. ನಗರದ ಹೊರ ವಲಯದಲ್ಲಿ 15 ಎಕರೆಯನ್ನು ಜಿಲ್ಲಾಡಳಿತ ಕಾಯ್ದಿರಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ 2012ರಲ್ಲಿ ಸರ್ಕಾರ ಒಪ್ಪಿಗೆ ನೀಡಿತ್ತು. ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ ಕೋರ್ಸ್ಗಳನ್ನು 2013–14ನೇ ಸಾಲಿನಲ್ಲಿ ಆರಂಭಿಸಲು ಸರ್ಕಾರ ತಿಳಿಸಿತ್ತು.

ಎಐಸಿಟಿಇ(ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್) ನಿಯಮಾವಳಿ ಅನುಸಾರ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿದಂತೆ ಒಟ್ಟು 211 ಹುದ್ದೆಗಳ ಭರ್ತಿಗೂ ಆದೇಶ ಹೊರಡಿಸಿತ್ತು. ಕಟ್ಟಡ ಇಲ್ಲದ ಕಾರಣ ಈಗಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿಯೇ ಕಾಲೇಜು ಆರಂಭಿಸಲು ಚಿಂತನೆ ನಡೆದಿತ್ತು. ಆದರೆ, ಇದಕ್ಕೆ ಎಐಸಿಟಿಇ ಒಪ್ಪಿಗೆ ನೀಡಲಿಲ್ಲ. ಕಟ್ಟಡ ಇಲ್ಲದೆ ಅನುಮೋದನೆ ನೀಡಲು ನಿರಾಕರಿಸಿತ್ತು. ಕಟ್ಟಡಕ್ಕೆ ಜಾಗ ನಿಗದಿಯಾಗದ ಕಾರಣ ನಿರ್ಮಾಣ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು.

ಕಡೂರು ರಸ್ತೆಯ ಪವಿತ್ರ ವನ ಎದುರಿನ ರಸ್ತೆಯಲ್ಲಿರುವ ಗೇಟ್ ವೇ ಹೋಟೆಲ್ನಿಂದ ಮುಂದೆ ಸಾಗಿದರೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಪಾಳು ಬಿದ್ದಿರುವ ಸ್ಥಿತಿಯಲ್ಲಿ ಕಟ್ಟಡವೊಂದು ಎದುರಾಗುತ್ತದೆ. 2017ರಲ್ಲಿ ಜಿಲ್ಲಾಧಿಕಾರಿ ಕಚೇರಿ ಸಂಕಿರಣ ನಿರ್ಮಾಣಕ್ಕೆ ಆರಂಭಿಸಿದ್ದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅದು ಈಗ ಪಾಳುಬಿದ್ದ ಸ್ಥಿತಿಯಲ್ಲಿದೆ.

ಕುರುವಂಗಿ ಗ್ರಾಮದ ಸರ್ವೆ ನಂಬರ್ 42ರ ಈ ಜಾಗ ಖಾಸಗಿ ವ್ಯಕ್ತಿಯೊಬ್ಬರಿಗೆ ಮಂಜೂರಾಗಿದ್ದ ಕಾರಣಕ್ಕೆ ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ದಂಟರಮಕ್ಕಿ ಕೆರೆ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಆದ್ದರಿಂದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಹಾಗೇ ಉಳಿದಿದೆ.

ಜಾಗ ಮರಳಿ ಪಡೆಯಲು ಜಿಲ್ಲಾಡಳಿತ ಪ್ರಯತ್ನಿಸಿತ್ತು. ಈ ವಿವಾದವನ್ನು ಜಿಲ್ಲಾಡಳಿತ ಈಗ ಬಗೆಹರಿಸಿದೆ. ನ್ಯಾಯಾಲಯದ ಮೆಟ್ಟಿಲೇರಿದ್ದ ವ್ಯಕ್ತಿಗೆ ಪರ್ಯಾಯವಾಗಿ ಜಿಲ್ಲಾಡಳಿತ 6 ಎಕರೆ ಜಾಗ ನೀಡಿ ವಿವಾದವನ್ನು ಅಂತ್ಯಗೊಳಿಸಿದೆ. ಜತೆಗೆ ಈ ಹಿಂದೆ ಜಿಲ್ಲಾ ಕಚೇರಿಗಳ ಸಂಕೀರ್ಣಕ್ಕೆ ಮೀಸಲಿರಿಸಿದ್ದ ಜಾಗದಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಭಾಗಶಃ ಕಟ್ಟಡ ಹಾಗೂ ಪಕ್ಕದ ಸರ್ಕಾರಿ ಜಾಗ ಸೇರಿಸಿ 15 ಎಕರೆಯನ್ನು ಎಂಜಿನಿಯರಿಂಗ್ ಕಾಲೇಜಿಗೆ ಮೀಸಲಿಟ್ಟಿದೆ. ಆರ್ಥಿಕ ಇಲಾಖೆಯಿಂದ ಅನುಮೋದನೆ ಕೋರಿ ಪ್ರಸ್ತಾವನೆಯನ್ನೂ ಸಲ್ಲಿಸಿದೆ.

ಅರ್ಧಕ್ಕೆ ನಿಂತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನೂ ಸೇರಿಸಿಕೊಂಡು ಕಾಲೇಜು ಕಟ್ಟಡ ನಿರ್ಮಾಣ ಮಾಡಬಹುದಾಗಿದೆ. ಜಾಗ ನೀಡಿದರೆ ಉಳಿದೆಲ್ಲಾ ಯೋಜನೆಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ನೋಡಿಕೊಳ್ಳಲಿದೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹೆಸರಿಗೆ ಖಾತೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

₹58 ಕೋಟಿ ಪ್ರಸ್ತಾವನೆ

ಜಾಗದ ವಿವಾದ ಬಗೆಹರಿದ ಬಳಿಕ ಕಾಲೇಜು ಕಟ್ಟಡ ಸ್ಥಾಪನೆಗೆ ₹58 ಕೋಟಿ ಮೊತ್ತದ ವಿಸ್ತೃತ ಯೋಜನೆ ಸಿದ್ಧಪಡಿಸಿ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಆರ್ಥಿಕ ಇಲಾಖೆಯಿಂದ ಆಡಳಿತಾತ್ಮಕ ಅನುಮೋದನೆ ದೊರೆತು ಹಣ ಬಿಡುಗಡೆಯಾದರೆ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಒಪ್ಪಿಗೆ ದೊರೆತರೆ ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಬರಲಿದೆ. ಬಡ ಪೋಷಕರ ಕನಸುಗಳು ನನಸಾಗಲಿವೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.