ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ- ಜೆಡಿಎಸ್ ಷಡ್ಯಂತ್ರ: ಆರೋಪ

Published 19 ಆಗಸ್ಟ್ 2024, 14:44 IST
Last Updated 19 ಆಗಸ್ಟ್ 2024, 14:44 IST
ಅಕ್ಷರ ಗಾತ್ರ

ಕಡೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ನಡೆಸಿದ್ದು, ಅದು ಯಶಸ್ಸು ಕಾಣುವುದಿಲ್ಲ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಹೇಳಿದರು.

ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಸಖರಾಯಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಲು ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಂಡು ರಾಜ್ಯಪಾಲರ ಮೂಲಕ ಸಂಚು ನಡೆಸುತ್ತಿದೆ’ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಮಾಡಿ ಪ್ರತಿಕೃತಿ ದಹಿಸಿದರು.

ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಡಿ.ಎಲ್ ವಿಜಯ ಕುಮಾರ್, ಎಂ.ಎಲ್ ಮೂರ್ತಿ, ರವೀಶ್‌ ಬಸಪ್ಪ, ಎಚ್.ಪಿ ಮಂಜೇಗೌಡ, ಮಹಡಿಮನೆ ಸತೀಶ್, ಕೆ.ಎಸ್ ಶಾಂತೇಗೌಡ, ಸೌಂದರ್ಯ ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT