ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಹೆಚ್ಚಳಕ್ಕೆ ತಂಡವಾಗಿ ಕೆಲಸ: ಗೋಪಾಲಕೃಷ್ಣ

Published 27 ಮಾರ್ಚ್ 2024, 22:05 IST
Last Updated 27 ಮಾರ್ಚ್ 2024, 22:05 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಚುನಾವಣೆ ಮುಗಿದು ಚುನಾವಣಾ ಆಯೋಗವು ಸೂಚನೆ ನೀಡುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಹೇಳಿದರು.

ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ಸ್ವೀಪ್ ಸಮಿತಿಯ ವಾಟ್ಸ್‌ಆ್ಯಪ್‌ ಗ್ರೂಪ್‌ ಉದ್ಘಾಟಿಸಿ ಅವರು ಮಾತನಾಡಿದರು.

ನೀತಿ ಸಂಹಿತೆ ಜಾರಿಯಲ್ಲಿ ಇರುವುವರೆಗೂ ಯಾರೇ ಕಾರ್ಯಕ್ರಮ ಮಾಡಬೇಕಾದರೂ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು. ಐದು ವರ್ಷಕ್ಕೊಮ್ಮೆ ಬರುವ ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ಮತದಾರರು ಯಾವುದೇ ಅಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತದಾನ ಮಾಡಬೇಕು. ಮತದಾನದ ಮಹತ್ವ ತಿಳಿಸಲು ಸ್ವೀಪ್‌ ಸಮಿತಿಯಿಂದ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಚುನಾವಣೆಯ ಮಹತ್ವದ ಬಗ್ಗೆ ಹಾಗೂ ಮತದಾನದ ಹೆಚ್ಚಳದ ಬಗ್ಗೆ ತರಬೇತಿ ನೀಡಲಾಗಿದೆ. ಬಿಎಲ್‌ಒ ಹಾಗೂ ಎಲ್ಲಾ ಅಧಿಕಾರಿಗಳು ‌ತಂಡವಾಗಿ ಕೆಲಸ ಮಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಕ್ಕಿಂತ  ಶೇ 5ರಷ್ಟು ಮತ ಹೆಚ್ಚಿಸಬೇಕು ಎಂದರು. ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಎಚ್.ಡಿ.ನವೀನ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT