ಚಿಕ್ಕಮಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡಿದ್ದು, ಕೇಂದ್ರ ಸರ್ಕಾರ ಜಿಎಸ್ಟಿ ಇಳಿಕೆ ಮೂಲಕ ಪುಣ್ಯ ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಜಿಎಸ್ಟಿ ಇಳಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಬೆಂಬಲಿಸಿ ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಜನನದಿಂದ ಮರಣದ ತನಕ ರಾಜ್ಯದಲ್ಲಿ ತೆರಿಗೆ ಇದೆ. ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದರೆ ಹೆಚ್ಚು ದರವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಹಾದಿಯಲ್ಲಿ ಕನಿಷ್ಠ ಎರಡು ಹೆಜ್ಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಟ್ಟರೆ ರಾಜ್ಯ ಜನರಿಗೆ ಒಳಿತಾಗಲಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಯೋಚಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಮಾತನಾಡಿ, ‘ದೇಶದ ಜನರಿಗೆ ಹಬ್ಬದ ವಾತಾವರಣವನ್ನು ನರೇಂದ್ರ ಮೋದಿ ಸರ್ಕಾರ ಮಾಡಿಕೊಟ್ಟಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕನಕರಾಜ್, ನಗರ ಘಟಕ ಅಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಜಿಲ್ಲಾ ಘಟಕ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಮುಖಂಡ ಕೋಟೆ ರಂಗನಾಥ್, ಮಹಿಳಾ ಘಟಕದ ಅಧ್ಯಕ್ಷೆ ಜಸಂತಾ ಅನಿಲ್ಕುಮಾರ್, ಎಸ್ಸಿ ಘಟಕದ ಅಧ್ಯಕ್ಷ ಕುರುವಂಗಿ ವೆಂಕಟೇಶ್, ನಗರಸಭೆ ಸದಸ್ಯರಾದ ಕವಿತಾ ಶೇಖರ್, ಮಧುಕುಮಾರ್, ಮುಖಂಡರುಗಳದ ಪುಟ್ಟಸ್ವಾಮಿ, ಎಚ್.ಕೆ. ಕೇಶವಮೂರ್ತಿ, ಕೌಶಿಕ್, ದಿನೇಶ್, ಬೆನಡಿಕ್ಟ್ ಜೇಮ್ಸ್, ಪ್ರದೀಪ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.