ಶೃಂಗೇರಿ: ಶೃಂಗೇರಿ ಪಟ್ಟಣದ ವಿ.ಆರ್ ಗೌರೀಶಂಕರ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಯೋಜನೆಯಲ್ಲಿ ಒಂದಾದ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಕುಟುಂಬ ನಿರ್ವಹಣೆಗಾಗಿ ಜಾರಿಯಾದ ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಶಾಸಕ ಟಿ.ಡಿ ರಾಜೇಗೌಡ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನೋಂದಣಿಯಾಗಿರುವ ಅರ್ಹ ಫಲಾನುಭಾವಿಗಳಿಗೆ ಶಾಸಕರು ನೊಂದಣಿ ಕಾರ್ಡ್‍ನ್ನು ವಿತರಿಸಿದರು. ಫಲಾನುಭವಿಗಳ ನೊಂದಣಿ ಕಾರ್ಯದಲ್ಲಿ ಶ್ರಮೀಸಿದ ವಿವಿಧ ಇಲಾಖೆಯ ಸಿಬ್ಬಂದಿಯವರಿಗೆ ಅಭಿನಂದನೆ ಪತ್ರವನ್ನು ಶಾಸಕರು ಸಲ್ಲಿಸಿ ಅಭಿನಂದಿಸಿದರು. ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನ ಕಾರ್ಯಕ್ರಮ ನಡೆಯಿತು.
ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ, `ಬೆಲೆ ಎರಿಕೆ, ಹವಮಾನ ವೈಪರೀತ್ಯ, ನಿರುದ್ಯೋಗದ ಸಮಸ್ಯೆ ಇರುವ ಕುಟುಂಬಗಳಿಗೆ ಆರ್ಥಿಕವಾಗಿ ಸದೃಢವಾಗಲು ಮತ್ತು ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಕುಟುಂಬ ನಿರ್ವಹಣೆಗಾಗಿ ಸರ್ಕಾರ ಗೃಹಲಕ್ಷ್ಮೀ ಯೋಜನೆ ಜಾರಿಗೋಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆಯಲ್ಲಿ ನುಡಿದಂತೆ ಯೋಜನೆಗಳನ್ನು ಜಾರಿಗೋಳಿಸಿ ನಡೆದುಕೊಂಡಿದ್ದಾರೆ. ಅಧಿಕಾರಕ್ಕೆ ಬಂದು 100 ದಿನದ ಒಳಗೆ ಜಾರಿಗೋಳಿಸಿದೆ' ಎಂದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ಅಹಮದ್, ಮುಖ್ಯಾಧಿಕಾರಿ ಶ್ರೀಪಾದ್ ಆರ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಜಿ ರಾಘವೇಂದ್ರ, ಸಬ್ ಇನ್‍ಸ್ಪೆಕ್ಟರ್ ಭರ್ಮಪ್ಪ ಬೆಳಗಲಿ, ಶಿಕ್ಷಕ ಕೃಷ್ಣಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.