ಚಿಕ್ಕಮಗಳೂರು: ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಭರವಸೆ ಜೊತೆಗೆ ಸ್ವಾವಲಂಬಿ ಜೀವನ ನಿರ್ವಹಿಸಲು ಸಹಕಾರಿಯಾಗಿದೆ. ಈ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ ಹೇಳಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಸಹಾಯಕ ಮತ್ತು ಬಡ ಕುಟುಂಬಗಳಿಗೆ ವರದಾನ ಆಗಿರುವ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆ ಜಾರಿ ಮಾಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕಾರಿಯಾಗಿವೆ ಎಂದರು.

ಜಿಲ್ಲೆಯಾದ್ಯಂತ 2024ರ ಡಿಸೆಂಬರ್ ವರೆಗೆ ಗೃಹಲಕ್ಷ್ಮಿ ಯೋಜನೆಯಡಿ 2,14,404 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು ₹42.88 ಕೋಟಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,52,350 ಫಲಾನುಭವಿಗಳಿದ್ದು, ಒಟ್ಟು ₹11.80 ಕೋಟಿ ಭರಿಸಲಾಗಿದೆ. ಜಿಲ್ಲೆಯಲ್ಲಿ 2,63,229 ಪಡಿತರ ಕಾರ್ಡ್ಗಳಿದ್ದು, ₹178.86 ಕೋಟಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ. ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಬಾಕಿ ಇರುವ ಫಲಾನುಭವಿಗಳಿಗೆ ಹಣ ವರ್ಗಾಯಿಸಲು ಅಗತ್ಯ ಕ್ರಮ ವಹಿಸಿ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ನಾಗರಿಕರಿಗೂ ತಲುಪಿಸಲು ಕಾರ್ಯಕ್ರಮ ಆಯೋಜಿಸಿ ವ್ಯಾಪಕ ಪ್ರಚಾರ ಮಾಡಿ ಅರಿವು ಮೂಡಿಸಲಾಗುತ್ತಿದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ರಾಜಗೋಪಾಲ್, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ಜೇಮ್ಸ್ ಡಿಸೋಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.