ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು: ಬಸ್ ತಂಗುದಾಣ ನಿರ್ಮಿಸಿಕೊಟ್ಟ ಹಳೇ ವಿದ್ಯಾರ್ಥಿ

ಲಾಲ್ ಬಹದ್ದೂರ್ ಶಾಸ್ತ್ರಿ ಪ್ರೌಢಶಾಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮ
Published : 9 ನವೆಂಬರ್ 2023, 13:28 IST
Last Updated : 9 ನವೆಂಬರ್ 2023, 13:28 IST
ಫಾಲೋ ಮಾಡಿ
Comments

ಕೊಪ್ಪ: ತಾಲ್ಲೂಕಿನ ಹಿರೇಕೊಡಿಗೆ ಗ್ರಾ.ಪಂ. ವ್ಯಾಪ್ತಿಯ ಗಡಿಕಲ್‌ನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರೌಢಶಾಲೆ ಹಾಗೂ ಬಿ.ಜಿ.ಎಸ್. ಅಕ್ಷರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ದಿ.ಕೋಲ್ಗಾರ್ ಶ್ರೀನಿವಾಸ್‌ ನಾಯಕ್ ಮತ್ತು ದಿ.ಮಂಜುನಾಥ ನಾಯಕ್ ಸ್ಮರಣಾರ್ಥವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು ಈಚೆಗೆ ಆದಿಚುಂಚನಗಿರಿ ಸಂಸ್ಥಾನದ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಉದ್ಘಾಟಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಗುಣನಾಥ ಸ್ವಾಮೀಜಿ, ‘ಬಾಲ ಗಂಗಾಧರನಾಥ ಸ್ವಾಮೀಜಿ ಹಳ್ಳಿ ಹಳ್ಳಿಗೆ ಭೇಟಿ ನೀಡಿ, ದಾನಗಳನ್ನು ಸ್ವೀಕರಿಸಿ ಆದಿಚುಂಚನಗಿರಿಯನ್ನು ಅಭಿವೃದ್ಧಿ ಪಡಿಸಿದರು. ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಿದರು’ ಎಂದು ಹೇಳಿದರು.

‘ಇದೇ ಶಾಲೆಯ ಹಳೇ ವಿದ್ಯಾರ್ಥಿಯಾದ ಪ್ರಸನ್ನ ಅವರು ತಾವು ಓದಿದ ಶಾಲೆಗೆ ಪ್ರೀತಿ, ವಿಶ್ವಾಸದಿಂದ ಅನೇಕ ಸಂದರ್ಭದಲ್ಲಿ ಆರ್ಥಿಕ ಸಹಾಯ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಿಗಾಗಿ ಬಸ್ ತಂಗುದಾಣವನ್ನು ₹3.25 ಲಕ್ಷ ವೆಚ್ಚದಲ್ಲಿ ತಮ್ಮ ಅಜ್ಜ ಹಾಗೂ ತಂದೆಯ ಹೆಸರಿನಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಮುಂದೆಯೂ ದಾನ, ಧರ್ಮ ಮಾಡುವ ಶಕ್ತಿಯನ್ನು ಭಗವಂತ ಅವರಿಗೆ ಕರುಣಿಸಲಿ’ ಎಂದರು.

ಶಾಸಕ ಟಿ.ಡಿ.ರಾಜೇಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧೀಶರಾಗಿದ್ದ ಬಾಲಗಂಗಾಧರನಾಥ ಸ್ವಾಮೀಜಿಯವರ ಸೇವೆಯನ್ನು ಸ್ಮರಿಸಿದರು. ಶಾಲೆಯ ಅಭಿವೃದ್ಧಿಗೆ ಬೇಕಾದ ಅನುದಾನ ಕೊಡಿಸುವುದಾಗಿ ಭರವಸೆ’ ನೀಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ, ಶಾಲೆಯ ಅಭಿವೃದ್ಧಿ ಶ್ಲಾಘಿಸಿದರು.

ಪ್ರಸನ್ನ ಅವರ ತಾಯಿ ಹಾಗೂ ಇದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ವಿದ್ಯಾನಂದಕುಮಾರ್ ಅವರ ಸೇವೆ ಸ್ಮರಿಸಿ ಗೌರವಿಸಲಾಯಿತು. ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಸನ್ಮಾನಿಸಲಾಯಿತು.

ಪ್ರೌಢಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಎಚ್.ಎಸ್.ರಮೇಶ್, ಹಿರೇಕೊಡಿಗೆ ಬಿ.ಜಿ.ಎಸ್. ಶಿಕ್ಷಣ ಸಂಸ್ಥೆ ಸಂಯೋಜಕ ಕೆ.ಎಸ್.ಅಣ್ಣಯ್ಯ, ಹಿರೇಕೊಡಿಗೆ ಗ್ರಾಮ ಪಂಚಾಯಿತಿ ಸದಸ್ಯೆ ಧನ್ಯಶ್ರೀ ವಿಶ್ವ, ಶಾಲಾ ಆಡಳಿತ ಮಂಡಳಿ ಸದಸ್ಯ ಎ.ಎನ್.ಮಂಜುನಾಥ, ಕೋಲ್ಗಾರ್ ನಿವೃತ್ತ ಶಿಕ್ಷಕ ಆಶಾ ವಿದ್ಯನಂದಕುಮಾರ್, ಕೋಲ್ಗಾರ್ ಜಯರಾಮ್, ಪ್ರೌಢಶಾಲೆ ಮುಖ್ಯ ಶಿಕ್ಷಕ ಸತೀಶ್, ಬಿ.ಜಿ.ಎಸ್.ಅಕ್ಷರ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಜೇಶ್, ಶಿಕ್ಷಕ ಮುದ್ದುರಾಜ್, ಶಾಲಾ ಆಡಳಿತ ಮಂಡಳಿ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT