ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನಃಶ್ಚೇತನಗೊಂಡ ಕೆರೆ ಹಸ್ತಾಂತರ

ಬಿ.ಎಂ.ಕೊಪ್ಪಲು ಗ್ರಾಮದ ಕಲ್ಲಳ್ಳಿಕಟ್ಟೆ ಕೆರೆ ಗ್ರಾಮ ಪಂಚಾಯಿತಿ ಸುಪರ್ದಿಗೆ
Last Updated 4 ಅಕ್ಟೋಬರ್ 2022, 6:05 IST
ಅಕ್ಷರ ಗಾತ್ರ

ಕಡೂರು: ಗ್ರಾಮೀಣ ಭಾಗಗಳಲ್ಲಿ ಕೆರೆಗಳ ಪುನಃಶ್ಚೇತನ ಮಾಡುವುದ ರಿಂದ ರೈತಾಪಿ ವರ್ಗಕ್ಕೆ ಅನುಕೂಲ ವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್ ತಿಳಿಸಿದರು.

ಸೋಮವಾರ ತಾಲ್ಲೂಕಿನ ಬಿ.ಎಂ.ಕೊಪ್ಪಲು ಗ್ರಾಮದಲ್ಲಿ ಯೋಜನೆಯ ವತಿಯಿಂದ ಪುನಃಶ್ಚೇತನಗೊಂಡ ಕಲ್ಲಳ್ಳಿಕಟ್ಟೆ ಕೆರೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಕೆರೆಗಳು ರೈತರ ಜೀವನಾಡಿ. ಅವುಗಳನ್ನು ಉಳಿಸಿಕೊಂಡರೆ ಸಮೃದ್ಧಿ ಎಂಬ ಆಶಯದಿಂದ ಕೆರೆಗಳನ್ನು ಪುನಃಶ್ಚೇತನ ಮಾಡುವ ಯೋಜನೆಯಡಿ ತಾಲ್ಲೂಕಿನಲ್ಲಿ ಅಭಿವೃದ್ಧಿಪಡಿಸಿದ ಮೂರನೇ ಕೆರೆ ಇದಾಗಿದೆ. ಒಟ್ಟು ₹ 9.10 ಲಕ್ಷ ವೆಚ್ಚವಾಗಿದ್ದು, ₹ 5.05 ಲಕ್ಷ ಯೋಜನೆಯ ಮೂಲಕ ಭರಿಸಲಾಗಿದೆ. ಈ ಕೆರೆಯನ್ನು ಸಂರಕ್ಷಿಸಿಕೊಂಡು ಉಳಿಸಬೇಕಾದ ಜವಾಬ್ದಾರಿ ಎಲ್ಲರದ್ದಾಗಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ದೇವರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನುಜಾ ಬಾಗಿನ ಅರ್ಪಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನುಕೆರೆ ಸಮಿತಿ ಅಧ್ಯಕ್ಷ ವನಾಗರಾಜ್ ವಹಿಸಿದ್ದರು. ಬಿಜೆಪಿ ಮಂಡಲಾಧ್ಯಕ್ಷ ಬಿ.ಪಿ. ದೇವಾನಂದ್, ಧರ್ಮಸ್ಥಳ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ನಿಂಗರಾಜ್, ನಿವೃತ್ತ ಶಿಕ್ಷಕ ಕೆ. ಚಂದ್ರಪ್ಪ, ಕೃಷಿ ಮೇಲ್ವಿಚಾರಕ ರಾಘವೇಂದ್ರ, ವಲಯ ಮೇಲ್ವಿಚಾರಕ ಶಶಿಕುಮಾರ್, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT