ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ: ಸಿ.ಟಿ.ರವಿ ವಿರುದ್ಧ ಎಫ್‌ಐಆರ್

Published 28 ಏಪ್ರಿಲ್ 2024, 19:37 IST
Last Updated 28 ಏಪ್ರಿಲ್ 2024, 19:37 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಚುನಾವಣೆ ಮುನ್ನಾದಿನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ಪೊಲೀಸ್ ಇಲಾಖೆ ದಾಖಲಿಸಿದೆ.

ಏ.25ರಂದು ಎಕ್ಸ್‌ನಲ್ಲಿ ಹೇಳಿಕೆ ಪ್ರಕಟಿಸಿದ್ದ ಸಿ.ಟಿ. ರವಿ ಅವರು, ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಈ ದೇಶದ ಸಂಪತ್ತಿನ ಮೇಲೆ ಮೊದಲ ಹಕ್ಕು ಹೊಂದಲಿದೆ’ ಎಂದು ಪೋಸ್ಟ್ ಮಾಡಿದ್ದರು. ಏ.26ರಂದು ಪ್ರಕಟಿಸಿದ್ದ ಪೋಸ್ಟ್‌ನಲ್ಲಿ ‘ಕಾಂಗ್ರೆಸ್‌ನ ಪ್ರಣಾಳಿಕೆ ನೋಡಿದರೆ ಇಸ್ಲಾಮಿಕ್ ದೇಶಗಳ ಐಎಸ್ ರೀತಿಯಲ್ಲಿದೆ’ ಎಂದಿದ್ದರು.

ಎರಡೂ ಪೋಸ್ಟ್‌ಗಳ ಕುರಿತು ಸಹಾಯಕ ಚುನಾವಣಾಧಿಕಾರಿ ನೀಡಿದ್ದ ದೂರಿನ ಮೇರೆಗೆ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT