ಶನಿವಾರ, ಫೆಬ್ರವರಿ 29, 2020
19 °C

ಎಚ್‌ಡಿಕೆ ಗಂಭೀರ ರಾಜಕಾರಣಿಯಲ್ಲ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ಎಚ್‌.ಡಿ.ಕುಮಾರಸ್ವಾಮಿ ಗಂಭೀರ ರಾಜಕಾರಣಿ ಅಲ್ಲ, ಅವರು ಕೀಳುಮಟ್ಟದ ಪದಗಳನ್ನು ಬಳಸುತ್ತಾರೆ’ ಆರೋಗ್ಯ ಸಚಿವ ಶ್ರೀರಾಮುಲು ಟೀಕಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕುಮಾರಸ್ವಾಮಿ ಅವರನ್ನು ವೈಯುಕ್ತಿಕವಾಗಿ ನಾನು ಯಾವತ್ತೂ ಟೀಕಿಸಿಲ್ಲ. ಮನೆಹಾಳು ಕೆಲಸ ಮಾಡಿದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಮಾರ್ಮಿಕವಾಗಿ ನುಡಿದರು.

‘ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯ ಮತ್ತು ಎಚ್‌.ಡಿ.ಕುಮಾರಸ್ವಾಮಿ ಹತಾಶರಾಗಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಅಧಿಕಾರದಲ್ಲಿದ್ದಾಗ ಆರ್ಥಿಕ ದಿವಾಳಿ ಮಾಡಿದ್ದಾರೆ. ಸಂಪನ್ಮೂಲ ಸರಿಪಡಿಸಿಕೊಂಡು ಉತ್ತಮ ಬಜೆಟ್‌ ನೀಡುವ ಪ್ರಯತ್ನದಲ್ಲಿ ಮುಖ್ಯಮಂತ್ರಿ ಯುಡಿಯೂರಪ್ಪ ತೊಡಗಿದ್ದಾರೆ’ ಎಂದರು.

‘ರಾಜ್ಯದಲ್ಲಿ 97 ಮಂದಿ ರಕ್ತ ಮಾದರಿ ಸಂಗ್ರಹಿಸಿದ್ದು, ಈ ಪೈಕಿ 68 ಮಂದಿಯ ರಕ್ತಪರೀಕ್ಷೆ ವರದಿ ಬಂದಿದೆ. ಕೊರೊನಾ ವೈರಸ್‌ ಕಂಡುಬಂದಿಲ್ಲ’ ಎಂದು ತಿಳಿಸಿದರು.

‘ಕೊರೊನಾ ವೈರಸ್‌ ಬಗ್ಗೆ ಮುಂಜಾಗ್ರತೆ ವಹಿಸಲಾಗಿದೆ. ಕೇರಳದ ವಾಹನಗಳ ತಪಾಸಣೆ, ವಿಮಾನ ನಿಲ್ದಾಣ, ಬಂದರುಗಳಲ್ಲಿ ರಕ್ತ ತಪಾಸಣೆ, ರಾಜ್ಯದಲ್ಲೇ ರಕ್ತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಈ ವೈರಸ್‌ ಬಗ್ಗೆ ಜಾಗೃತಿ ಮೂಡಿಸಲು ಎಲ್‌ಇಡಿ ಪರದೆ ವಾಹನಕ್ಕೆ ಚಾಲನೆ ನೀಡಲಾಗಿದ್ದು, ಸಂಚಾರ ಶುರುವಾಗಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು