ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ಕಾರ್ಮಿಕರಲ್ಲಿ ಮಂಗನ ಕಾಯಿಲೆ ದೃಢ

Last Updated 8 ಫೆಬ್ರುವರಿ 2020, 14:52 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕಿನ ಮಡಬೂರು ಗ್ರಾಮ ವ್ಯಾಪ್ತಿಯ ಎಸ್ಟೇಟ್‌ನಲ್ಲಿ ಕೆಲಸಕ್ಕೆ ಬಂದಿದ್ದ ಮೂವರು ಕಾರ್ಮಿಕರಲ್ಲಿ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ.

ಎಸ್ಟೇಟ್‌ನಲ್ಲಿ ಕಾಫಿ ಕೊಯ್ಲಿಗೆ ಮಧ್ಯಪ್ರದೇಶ ಮತ್ತು ಅಸ್ಸಾಂನಿಂದ ಕಾರ್ಮಿಕರು ಬಂದಿದ್ದರು. ಇವರಲ್ಲಿ ನಾಲ್ವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ, ರಕ್ತದ ಮಾದರಿಯನ್ನು ಶಿವಮೊಗ್ಗದ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯಕ್ಕೆ (ವಿಡಿಎಲ್) ಕಳುಹಿಸಲಾಗಿತ್ತು. ಆ ಪೈಕಿ ಮೂವರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಂದಿದ್ದ ಇಬ್ಬರು ಸ್ಥಳೀಯವಾಗಿ ಚಿಕಿತ್ಸೆ ಪಡೆದು, ಹಿಂದುರುಗಿ ಹೋಗಿದ್ದಾರೆ. ಮತ್ತೊಬ್ಬರು ಅಸ್ಸಾಂ ಮೂಲದ ಮಹಿಳೆಯಾಗಿದ್ದು, ಅವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಶನಿವಾರ ಸಂಜೆ ಆಸ್ಪತ್ರೆ ಸಿಬ್ಬಂದಿ ತೆರಳಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ.

ಈ ಬಗ್ಗೆ ‘ಪ್ರಜಾವಾಣಿ’ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಪ್ರಸಾದ್ ಅವರನ್ನು ಸಂಪರ್ಕಿಸಿದಾಗ ಮಡಬೂರು ಎಸ್ಟೇಟ್‌ನಲ್ಲಿ ಕೆಲಸಕ್ಕೆ ಬಂದಿದ್ದ ಮೂವರು ಕಾರ್ಮಿಕರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡ ನಂತರ ಖಚಿತ ಪಡಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT