ಹೊಸಕೆರೆ (ನರಸಿಂಹರಾಜಪುರ): ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳುವ ಅರ್ಹ ರೈತರಿಗೆ ಸಹಾಯಧನ ಲಭ್ಯವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ರೋಹಿತ್ ಹೇಳಿದರು.

ತಾಲ್ಲೂಕಿನ ಹೊಸಕೆರೆ ಸಮುದಾಯ ಭವನದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ತೋಟಗಾರಿಕೆ ಇಲಾಖೆಯಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಹನುಮಂತಪ್ಪ ಮಾಹಿತಿ ನೀಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು ನಮ್ಮ ಕೆರೆ ಕಾರ್ಯಕ್ರಮ ಎಂಬ ಯೋಜನೆ ಇದ್ದು ಇದನ್ನು ರೈತರು ಉಪಯೋಗಿಸಿಕೊಳ್ಳಬೇಕು. ಕೃಷಿ ಚಟುವಟಿಕೆಗಳಿಗೆ ಯೋಜನೆಯಿಂದ ಹಲವು ಸೌಲಭ್ಯಗಳಿವೆ ಎಂದರು.

ಕೃಷಿ ಇಲಾಖೆಯ ತಾಂತ್ರಿಕ ವ್ಯವಸ್ಥಾಪಕಿ ರಂಜಿತಾ ಮಾತನಾಡಿ, ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆ ಮಾಡಿಸಿ ಅದರ ಫಲಿತಾಂಶದ ಆಧಾರದ ಮೇಲೆ ಗೊಬ್ಬರ ಹಾಕಬೇಕು. ರೈತರು ಸಾಧ್ಯವಾದಷ್ಟು ಸಾವಯವ ಗೊಬ್ಬರ ಬಳಸಬೇಕು ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಸುಸೀಲ ಮಾತನಾಡಿದರು. ಒಕ್ಕೂಟದ ಅಧ್ಯಕ್ಷ ರಾಜೇಶ್, ಸೇವಾ ಪ್ರತಿನಿಧಿಗಳಾದ ವೀಣಾ, ಸುನೀತಾ, ಮಂಜುಳಾ ಹಾಗೂ ಒಕ್ಕೂಟದ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.