ಕೊಪ್ಪ: ತಾಲ್ಲೂಕು ಕೇಂದ್ರದಲ್ಲಿ ₹12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮಳೆಗಾಲದಲ್ಲಿ ಸೋರುತ್ತಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಎಚ್.ಕೆ.ದಿನೇಶ್ ಹೊಸೂರು ದೂರಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶೋಭಾ ಕರಂದ್ಲಾಜೆ ಅವರು ಸಂಸದೆಯಾಗಿದ್ದಾಗ ಕೇಂದ್ರ ಸರ್ಕಾರದಿಂದ ಆಸ್ಪತ್ರೆ ಕಟ್ಟಡ ಮಂಜೂರಾಯಿತು. ವ್ಯವಸ್ಥಿತ ಕಟ್ಟಡ ನಿರ್ಮಾಣವಾಗುವಂತೆ ನೋಡಿಕೊಳ್ಳುವುದು ಕ್ಷೇತ್ರದ ಶಾಸಕರ ಜವಾಬ್ದಾರಿ. ಜು. 7ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ, ಎಂಬ ಮಾಹಿತಿ ಇದೆ. ಆದರೆ, ಇದೀಗ ಕಟ್ಟಡಕ್ಕೆ ಟಾರ್ಪಲ್ ಹೊದಿಸಬೇಕಾದ ಸ್ಥಿತಿ ಎದುರಾಗಿದೆ’ ಎಂದರು.

ಭ್ರಷ್ಟಾಚಾರ ಅಥವಾ ಕಳಪೆ ಕಾಮಗಾರಿ ಕಾರಣಕ್ಕೆ ಕಟ್ಟಡ ಸೋರುತ್ತಿದೆ ಎಂದು ಗೊತ್ತಿಲ್ಲ. ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಕೊಪ್ಪ ಬಸ್ ನಿಲ್ದಾಣ ಸೋರುತ್ತಿದ್ದು ಛತ್ರಿ ಹಿಡಿದು ನಿಲ್ಲುವ ಪರಿಸ್ಥಿತಿ ಇದ್ದು, ಕುಸಿದು ಬೀಳುವ ಆತಂಕವಿದೆ. ತಾಲ್ಲೂಕಿನಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗೆ ಶಾಸಕರೇ ನೇರ ಹೊಣೆ ಎಂದು ಅವರು ಆರೋಪಿಸಿದರು.

ವಸತಿ ಶಾಲೆಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಭವಿಷ್ಯ ಕಾಣಬೇಕಿದ್ದವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇಲ್ಲಿ ಹಾಸ್ಟೆಲ್ ವ್ಯವಸ್ಥೆ ಸರಿಯಾಗಿಲ್ಲ. ಸಮಸ್ಯೆಗೆ ಸ್ಪಂದಿಸಬೇಕಿದ್ದ ಶಾಸಕರು ಶಾಲೆಗೆ ಭೇಟಿ ನೀಡಿಲ್ಲ, ಪೋಷಕರಿಗೆ ಸಾಂತ್ವನ ಹೇಳಿಲ್ಲ ಎಂದು ದೂರಿದರು.

ಇತ್ತೀಚೆಗೆ ಶೃಂಗೇರಿ ಕಡೆಗೆ ಪ್ರವಾಸ ಬಂದಿದ್ದ ಬಸ್ ಬಾಳೆಹೊನ್ನೂರು ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಎಲ್ಲಾ ಕಡೆ ರಸ್ತೆ ಗುಂಡಿಗಳು ಹೆಚ್ಚಿವೆ. ರಸ್ತೆ ಗುಂಡಿಗಳಿಗೆ ಗಿಡ ನೆಟ್ಟು ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಎಚ್.ಆರ್.ರೇಖಾ, ಉಪಾಧ್ಯಕ್ಷೆ ಗಾಯತ್ರಿ ಶೆಟ್ಟಿ, ಪಕ್ಷದ ಮುಖಂಡರಾದ ಜಯಂತ್, ದಿವಾಕರ್ ಭಟ್, ಪದ್ಮಾವತಿ ರಮೇಶ್, ಭಿಷೇಜ ಭಟ್, ಶತಾನಿಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.