ಬಿ.ಎಚ್.ಕೈಮರ (ನರಸಿಂಹರಾಜಪುರ): ‘ಸರ್ಕಾರಿ ಶಾಲೆಯ ಮಕ್ಕಳು ಇಂಗ್ಲೀಷ್ನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸಿರುವುದು ಸಂತಸದ ವಿಷಯ’ ಎಂದು ಕೆಡಿಪಿ ಸದಸ್ಯ, ಗುಬ್ಬಿಗಾ ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ. ಸಾಜು ಹೇಳಿದರು.

ತಾಲ್ಲೂಕಿನ ಬಿ.ಎಚ್.ಕೈಮರದ ಈಚಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಒಂದನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಿಗೆ ಮುಂದಿನ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಇಂಗ್ಲೀಷ್ ಅವಶ್ಯಕ. ಪ್ರಾಥಮಿಕ ಹಂತದಲ್ಲಿ ಇಂಗ್ಲೀಷ್ನಲ್ಲಿ ಮಕ್ಕಳು ಪರಿಣತರಾದರೆ ಭವಿಷ್ಯದಲ್ಲಿ ಅನುಕೂಲವಾಗಲಿದೆ ಎಂದರು.

ಶಿಕ್ಷಣ ಇಲಾಖೆಯ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವ್ಯಾ ನಾಯಕ್ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿಗಾಗಿ ಶಿಕ್ಷಣ ಇಲಾಖೆಯು ಹಲವಾರು ಕಾರ್ಯಕ್ರಮ ರೂಪಿಸುತ್ತಿದೆ. ಇದರಲ್ಲಿ ಒಂದನೇ ತರಗತಿಗೆ ಇಂಗ್ಲೀಷ್ ಮಾಧ್ಯಮವೂ ಸೇರಿದೆ. ವಿಶೇಷ ಎಂದರೆ ತಾಲೂಕಿನಲ್ಲಿ ಒಂದನೇ ತರಗತಿಯಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭಿಸಿರುವುದು ಈಚಿಕೆರೆ ಸರ್ಕಾರಿ ಶಾಲೆ ಪ್ರಥಮವಾಗಿದೆ ಎಂದರು.

ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎಂ.ವಿ. ರಾಜೇಂದ್ರ ಕುಮಾರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಇಂಗ್ಲೀಷ್ ಬಳಸುತ್ತಿರುವುದರಿಂದ ಪ್ರಾಥಮಿಕ ಶಾಲಾ ಹಂತದಲ್ಲಿ ಇಂಗ್ಲೀಷ್ಗೆ ಆದ್ಯತೆ ನೀಡುವುದು ಅವಶ್ಯಕ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳೊಂದಿಗೆ ಸರ್ಕಾರಿ ಶಾಲೆಯ ಮಕ್ಕಳು ಪೈಪೋಟಿ ನೀಡಬೇಕಾದರೆ ಇಂಗ್ಲೀಷ್ ಕಲಿಯಬೇಕಾಗಿದೆ. ಈಗ ಸರ್ಕಾರಿ ಶಾಲೆಯಲ್ಲಿ ಮಾತೃ ಭಾಷೆ ಕನ್ನಡ, ಇಂಗ್ಲೀಷ್ ಭಾಷೆಯನ್ನು ಒಟ್ಟಿಗೆ ಕಲಿಯಲು ಅವಕಾಶ ದೊರಕಿದೆ ಎಂದರು.

ಎಸ್ಡಿಎಂಸಿ ಅಧ್ಯಕ್ಷ ರಮಾಕಾಂತ್ ಉದ್ಘಾಟಿಸಿದರು. ಶಿಕ್ಷಣ ಸಂಯೋಜಕ ರಂಗಪ್ಪ, ಗುಬ್ಬಿಗಾ ಗ್ರಾಮ ಪಂಚಾಯಿತಿ ಸದಸ್ಯ ವಸಂತ ಕೋಟ್ಯಾನ್, ಬಿಐಇಆರ್ಟಿ ತಿಮ್ಮೇಶ್, ಸಿಆರ್ಪಿ ಅನಂತಪ್ಪ, ಎಸ್ಡಿಎಂಸಿ ಉಪಾಧ್ಯಕ್ಷೆ ಪ್ರಶೀಲಾ, ಮುಖ್ಯಶಿಕ್ಷಕಿ ವೀಣಾ ಕುಮಾರಿ, ಶಿಕ್ಷಕರಾದ ರೇಖಾ, ವಾಣಿ, ಆನಿಯಮ್ಮ, ಪುಷ್ಪಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.