ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಡೂರು | ಕಾಡುಗೊಲ್ಲರನ್ನು ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯ

Published 20 ನವೆಂಬರ್ 2023, 14:29 IST
Last Updated 20 ನವೆಂಬರ್ 2023, 14:29 IST
ಅಕ್ಷರ ಗಾತ್ರ

ಕಡೂರು: ಕಾಡುಗೊಲ್ಲ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ಒತ್ತಾಯಿಸಿ ತಾಲ್ಲೂಕು ಕಾಡುಗೊಲ್ಲರ ಸಂಘದ ಸದಸ್ಯರು ತಾಲ್ಲೂಕು ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಟಿ. ತಿಮ್ಮೇಗೌಡ ಮಾತನಾಡಿ, ‘ಕಾಡುಗೊಲ್ಲ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಕುಲ ಕಸುಬು ಮಾಡಿಕೊಂಡು ಕಷ್ಟದಿಂದ ಬದುಕುತ್ತಿರುವ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳು ದೊರೆತಿಲ್ಲ. ಸರ್ಕಾರ ನಮ್ಮ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ಸಾಂಕೇತಿಕ ಧರಣಿ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು.

ಕಾಡುಗೊಲ್ಲರ ಕುಲದೇವತೆ ಜುಂಜಪ್ಪನ ಹಸೆ ಬರೆದು, ಭಜನೆ ಪದಗಳನ್ನು ಹಾಡುವ ಮೂಲಕ ಧರಣಿ ನಡೆಸಲಾಯಿತು. ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ದೇವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ದಾನೇಶ್ ಪೂಜಾರಿ, ಉಪಾಧ್ಯಕ್ಷ ವೆಂಕಟೇಶ್ ಶಾಂತಪ್ಪ, ನಾಗರಾಜು, ಪಾರ್ಥ, ಅಣ್ಣಪ್ಪ, ಆರ್.ಜಿ.ಕೊಪ್ಪಲು ಮೂಡ್ಲಪ್ಪ, ದೊಡ್ಡೀರಪ್ಪ, ಯುವ ಘಟಕದ ಓಂಕಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT