ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ನೆಕ್ಕಿಸಿದ ಪ್ರಕರಣ: ಆರೋಪಿ ಅರ್ಜುನ್‌ಗೆ ಮಧ್ಯಂತರ ಜಾಮೀನು ನಿರಾಕರಣೆ

Last Updated 7 ಸೆಪ್ಟೆಂಬರ್ 2021, 16:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯ ಯುವಕಗೆ ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರಿಗೆ ಮಧ್ಯಂತರ ಜಾಮೀನು ನೀಡಲು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನಿರಾಕರಿಸಿದೆ.

ನ್ಯಾಯಾಧೀಶರಾದ ಬಿ. ಪುಷ್ಪಾಂಜಲಿ ಅವರು ಮಂಗಳವಾರ ಅರ್ಜಿ ವಿಚಾರಣೆ ನಡೆಸಿ, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದರು.

ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಪುನೀತ್‌ಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್‌ ಅವರನ್ನು ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಸೆ.1ರಂದು ಬಂಧಿಸಿದ್ದರು. 2ರಂದು ಚಿಕ್ಕಮಗಳೂರಿನಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT