ಚಿಕ್ಕಮಗಳೂರು: ‘ಒಳಮೀಸಲಾತಿ ರೊಸ್ಟರ್ ಹಂಚಿಕೆ ವಿರೋಧಿಸಿ ಹಾಗೂ ಹಳೆ ಮೀಸಲಾತಿ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಮಾರ್ಚ್ 24ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ‘ಬೆಂಗಳೂರು ಚಲೊ ಪ್ರತಿಭಟನಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ’ ಎಂದು ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ ನಾಯ್ಕ ತಿಳಿಸಿದರು.

ರಾಜ್ಯ ಸರ್ಕಾರದ ನೇಮಕಾತಿ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗಳ ಪ್ರವರ್ಗ ಬಿ ಮತ್ತು ಸಿ ಗುಂಪಿಗೆ ಶೂನ್ಯ ಹುದ್ದೆಗಳನ್ನು ಹಂಚಿಕೆ ಮಾಡಲಾಗಿತ್ತು. ಒಳ ಮೀಸಲಾತಿ ಹಂಚಿಕೆಯಿಂದ ಎಷ್ಟು ಅನ್ಯಾಯ ಮತ್ತು ಅಪ್ರಾಯೋಗಿಕ ಎಂಬುದು ತಿಳಿಯುತ್ತದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಅನ್ಯಾಯ ಖಂಡಿಸಿ ನಾಡಿನ ಬಂಜಾರ, ಭೋವಿ, ಕೊರಮ, ಕೊರಚ, ಛಲವಾದಿ, ಚರ್ಮಕಾರ, ಸೂಕ್ಷ್ಮ ಪರಿಶಿಷ್ಟ ಜಾತಿಗಳ ಸಂಘ –ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

‘ತ್ವರಿತವಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕು. ದೇಶವ್ಯಾಪಿ ನಡೆಯುತ್ತಿರುವ ಜನಗಣತಿಯ ಸಮಗ್ರ ದತ್ತಾಂಶ ಬರುವವರೆಗೆ ಒಳಮೀಸಲಾತಿ ಕುರಿತು ಏಕಪಕ್ಷೀಯ ನಿರ್ಧಾರ ಮಾಡಬಾರದು. ರಾಜ್ಯದಲ್ಲಿ ಒಳ ಮೀಸಲಾತಿ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸುವ ಮುನ್ನ ಸಮುದಾಯಗಳ ಮುಖಂಡರ ಜತೆಗೆ ಸಮಾಲೋಚನಾ ಸಭೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 7 ಮೀಸಲಾತಿ ಹೆಚ್ಚಳ ಮಾಡಿರುವ ಆದೇಶವನ್ನು ಸಂವಿಧಾನದ 9ನೇ ಷೆಡ್ಯೂಲ್ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿಗಳ ಬಳಿ ನಿಯೋಗ ಹೋಗಬೇಕು ಎಂದು ಒತ್ತಾಯಿಸಿದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯ ಅಂಕಿ–ಅಂಶಗಳು ಅಸ್ಪಷ್ಟ ಮತ್ತು ಸಾಲು ಸಾಲು ತಪ್ಪುಗಳಿಂದ ಕೂಡಿರುವಂತೆ ಭಾಸವಾಗುತ್ತಿವೆ. ತಕ್ಷಣ ಈ ಸಮೀಕ್ಷೆಯ ತಾಲ್ಲೂಕುವಾರು ಸಮಗ್ರ ದತ್ತಾಂಶ, ಮಾಹಿತಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು ಎಂದರು.

ಶಿಕ್ಷಣ ಪ್ರವೇಶ, ಹಾಸ್ಟೆಲ್ ಪ್ರವೇಶ ಮತ್ತು ಉದ್ಯೋಗ ನೇಮಕಾತಿ ಕುರಿತು ಇತ್ತೀಚೆಗೆ ಹೊರಡಿಸಿರುವ ಎಲ್ಲಾ ರೊಸ್ಟರ್ ಹಂಚಿಕೆ ಆದೇಶ, ಸುತ್ತೋಲೆಗಳನ್ನು ಹಿಂಪಡೆಯಬೇಕು. ಪರಿಶಿಷ್ಟರಿಗೆ ಮೀಸಲಾಗಿರುವ ಅನುದಾನವನ್ನು ಅನ್ಯ ಯೋಜನೆಗಳಿಗೆ ವರ್ಗಾವಣೆ ತಡೆಗಟ್ಟಲು ಕಾನೂನು ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಂಜಾರ ಸಮಾಜದ ಗೌರವಾಧ್ಯಕ್ಷ ಗಂಗಾಧರ್ ನಾಯ್ಕ, ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಕೊಲ್ಲಾಭೋವಿ, ಕೊರಚ–ಕೊರಮ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ್, ಮಂಜುನಾಥ್, ಬಂಜಾರ ಸಮಾಜ ಜಿಲ್ಲಾ ಉಪಾಧ್ಯಕ್ಷ ರಾಜಾನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.