ಮಂಗಳವಾರ, ಏಪ್ರಿಲ್ 13, 2021
23 °C

ಎಐಟಿ: 25ರಿಂದ ಅಂತರರಾಷ್ಟ್ರೀಯ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ಆದಿ ಚುಂಚನಗಿರಿ ವಿಶ್ವವಿದ್ಯಾಲಯದ ವತಿಯಿಂದ ಇದೇ 25 ಮತ್ತು 26ರಂದು ‘ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗಳು’ ವಿಷಯ ಕುರಿತು ನಗರದ ಆದಿ ಚುಂಚನಗಿರಿ ತಾಂತ್ರಿಕ ಶಿಕ್ಷಣ ವಿದ್ಯಾಲಯ(ಎಐಟಿ)ದಲ್ಲಿ ಅಂತರರಾಷ್ಟ್ರೀಯ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಎಐಟಿ ಪ್ರಾಚಾರ್ಯ ಪ್ರೊ.ಸಿ.ಟಿ.ಜಯದೇವ ಇಲ್ಲಿ ಸೋಮವಾರ ತಿಳಿಸಿದರು.

ಭಾರತೀಯ ಮಾಹಿತಿ ತಂತ್ರಜ್ಞಾನ ವಿದ್ಯಾಲಯದ ನಿರ್ದೇಶಕ ಪ್ರಯಾಗ್ ರಾಜ್ ಅವರು 25ರಂದು ಬೆಳಿಗ್ಗೆ 10 ಗಂಟೆಗೆ ಬಿಜಿಎಸ್ ಸಭಾಂಗಣದಲ್ಲಿ ಕಾರ್ಯಾಗಾರ ಉದ್ಘಾಟಿಸುವರು. ಆದಿಚುಂನಗಿರಿ ಮಠದ ನಿರ್ಮಲಾನಂದನಾಥಸ್ವಾಮೀಜಿ, ಗುಣನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕುಲಸಚಿವ ಪ್ರೊ.ಸಿ.ಕೆ.ಸುಬ್ಬರಾಯ, ಐಇಇಇ ಸಂಸ್ಥೆ ಅಧ್ಯಕ್ಷ ಕೇಶವ್ ಬಾಪಟ್, ಮಂಗಳೂರು ವಿಭಾಗದ ಮುಖ್ಯಸ್ಥ ಡಾ.ಮನೋಹರ್ ಪೈ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.

26ರಂದು ಸಂಜ4 ಗಂಟೆಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯುವುದು. ಮೊಬಿಜಿನಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ತೆರಗುಂಡಿ, ಎ10 ನೆಟ್‌ವರ್ಕ್ಸ್ ಸಂಸ್ಥೆಯ ತಾಂತ್ರಿಕ ವಿಭಾಗದ ಉಪಾಧ್ಯಕ್ಷ ಕಿಶೋರ್ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ಬಾಂಗ್ಲಾದೇಶ, ನೈಜೀರಿಯಾ, ಬ್ರುಣೈ, ದುಬೈ, ದೇಶದ ದೆಹಲಿ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಇಡಿಸ್ಸಾ, ಮಹಾರಾಷ್ಟ್ರ, ತಮಿಳುನಾಡು, ಗೋವಾ, ಆಂಧ್ರಪ್ರದೇಶ, ತೆಲಂಗಾಣದಿಂದ ಸುಮಾರು 256ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಬಂಧ ಮಂಡನೆ ಮಾಡುವರು ಎಂದು ಮಾಹಿತಿ ನೀಡಿದರು.

ಕಾರ್ಯಾಗಾರಕ್ಕೆ ₹15 ಲಕ್ಷ ವೆಚ್ಚವಾಗಲಿದೆ. ಅಖಿಲ ಭಾರತ ತಾಂತ್ರಿಕ ಮಂಡಳಿ(ಎಐಸಿಟಿಇ) ₹5 ಲಕ್ಷ , ಐಎಸ್‌ಟಿಇ ಸಂಸ್ಥೆ ₹50 ಸಾವಿರ, ಡಿಆರ್‌ಡಿಒ ಸಂಸ್ಥೆ ₹40 ಸಾವಿರ ಆರ್ಥಿಕ ನೆರವು ನೀಡಿವೆ ಎಂದರು.

ಎಐಟಿ ಕಾಲೇಜಿನ ಗಣಕ ಯಂತ್ರ ವಿಭಾಗದ ಪುಷ್ಪಾರವಿಕುಮಾರ್, ಪ್ರೊ.ಸುನೀತಾ, ಸಹಾಯಕ ಪ್ರೊ. ಸಂಗಾರೆಡ್ಡಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು