ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಆಕ್ರೋಶ

Last Updated 10 ಸೆಪ್ಟೆಂಬರ್ 2020, 8:23 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲ್ಲೂಕು ಕೇಂದ್ರ ಕಾರ್ಯಾರಂಭಕ್ಕೆ ಕ್ರಮವಹಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಲು ಕಳಸದಲ್ಲಿ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಕಾದುನಿಂತಿದ್ದರು. ಆದರೆ, ಸಂಸದೆ ಕಾರು ನಿಲ್ಲಿಸದೆ ಹೋಗಿದ್ದರಿಂದ ಕೆರಳಿದ ಮುಖಂಡರು, ಕಾರ್ಯಕರ್ತರು ದೀಢಿರ್‌ ಪ್ರತಿಭಟನೆ ನಡೆಸಿದರು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಕಳಸವನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಿ ವರ್ಷ ಕಳೆದರೂ ಕಾರ್ಯಗತಕ್ಕೆ ಕ್ರಮ ವಹಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ, ಸಂಸದೆ ಶೋಭಾ ವಿರುದ್ಧ ಘೋಷಣೆ ಮೊಳಗಿಸಿದರು.

50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶೋಭಾ ಅವರು ಕಳಸದಲ್ಲಿನ ಕಾರ್ಯಕ್ರಮ ಮುಗಿಸಿ ಹೊರಟ ನಂತ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಿದರು.

ಜೆಡಿಎಸ್‌ ಮುಖಂಡರಾದ ಎಚ್‌.ಎಚ್‌.ದೇವರಾಜ್‌, ಬಿ.ಬಿ.ನಿಂಗಯ್ಯ, ಮಂಜಪ್ಪಯ್ಯ, ಬ್ರಹ್ಮದೇವ, ರವಿ ರೈ, ಜ್ವಾಲನಯ್ಯ, ಕೇಶವ್‌ಗೌಡ ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT