ಸೀತೂರು (ನರಸಿಂಹರಾಜಪುರ): ರೈತರು ಜೀವಾಮೃತ ಬೇಸಾಯ ಪದ್ಧತಿ ಅಳಡಿಸಿಕೊಂಡರೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಬೆಳೆ ತೆಗೆಯಬಹುದು ಎಂದು ಸಾವಯವ ಕೃಷಿಕ ಮಾವಿನ ಹಿತ್ತಲು ನಾರಾಯಣ ಸಲಹೆ ನೀಡಿದರು.

ತಾಲ್ಲೂಕಿನ ಸೀತೂರು ಶಾಲಾ ಆವರಣದಲ್ಲಿ ನಡೆಯುತ್ತಿರುವ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ಶಿಬಿರದಲ್ಲಿ ಸಾವಯವ ಕೃಷಿ ಬಗ್ಗೆ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನ ಅಂಜುಮ್ ಮಾತನಾಡಿ, ವಿದ್ಯಾರ್ಥಿಗಳು ಸಂಸ್ಕಾರ, ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ನಬಾರ್ಡ್ ಅಧಿಕಾರಿ ಎಂ.ಪಿ. ಸುನೀತಾ, ನಬಾರ್ಡ್ನಿಂದ ರೈತರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಶಿಬಿರದ ಸಲಹೆಗಾರ ಮಂಜುನಾಥ್ ವಹಿಸಿದ್ದರು. ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸುರೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.