ಗುರುವಾರ , ಜೂನ್ 17, 2021
21 °C

ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ವಿವಿಧ ಇಲಾಖೆಗಳ 10 ಮಂದಿ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ತಲಾ ₹ 10 ಸಾವಿರ ನಗದು ಪುರಸ್ಕಾರ ಒಳಗೊಂಡಿದೆ. ಸರ್ಕಾರಿ ನೌಕರ ದಿನಾಚರಣೆ ಏ.21ರಂದು ನಡೆಯಬೇಕಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕೋವಿಡ್‌ನಿಂದಾಗಿ ಮುಂದೂಡಲಾಗಿದೆ. ಪುರಸ್ಕಾರಕ್ಕೆ ಆಯ್ಕೆಯಾಗಿರುವವರ ಪಟ್ಟಿ ಇಂತಿದೆ.

ಗ್ರೂಪ್‌ ‘ಎ’ ವಿಭಾಗ: ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಡಾ.ಎಚ್‌.ಎಲ್‌.ನಾಗರಾಜ್‌, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಿ.ಮೋಹನ್‌ಕುಮಾರ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ಹಾಗೂ ಜಿಲ್ಲಾ ಪಂಚಾಯಿತಿಯ ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ಸರಸ ಕೃಷ್ಣಕಿರಣ್‌.

ಗ್ರೂಪ್‌ ‘ಬಿ’ ವಿಭಾಗ: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಎನ್‌.ಎಂ.ವಿಂಧ್ಯಾ, ಮೂಡಿಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್‌, ಚಿಕ್ಕಮಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಸಿ.ಸುಜಾತಾ.

ಗ್ರೂಪ್‌ ‘ಸಿ’: ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಎಸ್‌.ಶೈಲಶ್ರೀ, ಬೆರಳಚ್ಚುಗಾರ್ತಿ ಎಸ್‌.ಪಾರ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಎಂ.ಪಿ.ದೇವಾನಂದ್‌

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.